ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಗರ ಪ್ರದೇಶಗಳಲ್ಲಿ ಅನಿಯಮಿತ ಲೋಡ್‌ಷೆಡ್ಡಿಂಗ್‌ : ನಿರ್ಧಾರ

By Staff
|
Google Oneindia Kannada News

ಬೆಂಗಳೂರು : ರೈತರ ಚಳವಣಿಗೆ ಮಣಿದು ಗ್ರಾಮಾಂತರ ಪ್ರದೇಶಗಳಿಗೆ 8 ಗಂಟೆ ನಿರಂತರ ವಿದ್ಯುತ್‌ ಒದಗಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿ ಅನಿಯಮಿತ ಲೋಡ್‌ಷೆಡ್ಡಿಂಗ್‌ ಜಾರಿಗೆ ತರಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ನಿರ್ಧರಿಸಿದೆ. ಈ ವಿಷಯವನ್ನು ಕೆ.ಪಿ.ಟಿ.ಸಿ.ಎಲ್‌. ವ್ಯವಸ್ಥಾಪಕ ನಿರ್ದೇಶಕ ವಿ.ಪಿ. ಬಾಳಿಗಾರ್‌ ಸ್ಪಷ್ಟಪಡಿಸಿದ್ದಾರೆ.

ಫೆ.1ರಿಂದ ಗ್ರಾಮಾಂತರ ಪ್ರದೇಶಗಳಿಗೆ ನಿರಂತರ 8 ಗಂಟೆ ವಿದ್ಯುತ್‌ ಪೂರೈಸಲಾಗುತ್ತಿದ್ದು, 2 ದಶಲಕ್ಷ ಯುನಿಟ್‌ ಅಧಿಕ ವಿದ್ಯುತ್‌ ಬಳಕೆಯಾಗುತ್ತಿದೆ. ರಾಜ್ಯದಲ್ಲಿ ಮಳೆ ಕೈಕೊಟ್ಟಿರುವ ಕಾರಣ ಮೊದಲೇ ವಿದ್ಯುತ್‌ ಕೊರತೆ ಇತ್ತು. ಇದರ ಜೊತೆಗೆ ಹೆಚ್ಚುವರಿ ವಿದ್ಯುತ್‌ ಬಳಕೆ ಆಗುತ್ತಿದೆ. ಈಹೊತ್ತು ವಿದ್ಯುತ್‌ ಬಳಕೆ 85 ದಶಲಕ್ಷ ಯುನಿಟ್‌ ಆಗಿದ್ದು ಅನಿಯಮಿತ ಲೋಡ್‌ ಷೆಡ್ಡಿಂಗ್‌ ಅನಿವಾರ್ಯ ಎಂದು ಅವರು ಹೇಳಿದರು.

ಆದಾಗ್ಯೂ ರಾಜ್ಯದ ಎಲ್ಲ ಪ್ರದೇಶಗಳಿಗೂ ಸಮರ್ಪಕವಾಗಿ ವಿದ್ಯುತ್‌ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕೇರಳ ರಾಜ್ಯದಿಂದ ವಿದ್ಯುತ್‌ ಖರೀದಿಸಲು ಮಾತುಕತೆಗಳು ನಡೆದಿವೆ. ಆಂಧ್ರಪ್ರದೇಶದಿಂದಲೂ 500 ಮೆಗಾವ್ಯಾಟ್‌ ವಿದ್ಯುತ್‌ ಪಡೆಯಲು ಪ್ರಯತ್ನಗಳು ಸಾಗಿವೆ ಎಂದು ಬಾಳಿಗಾರ್‌ ತಿಳಿಸಿದರು.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X