ಆಂಗ್ಲ ಭಾಷೆಯನ್ನು ಶಿಕ್ಷಣ ಕ್ರಮದಿಂದ ಕೈಬಿಡುವುದೇ... ಛೇ ಛೇ !
ಬೆಂಗಳೂರು: ಶಿಕ್ಷಣದಲ್ಲಿ ಇಂಗ್ಲಿಷ್ ಭಾಷೆಯನ್ನು ಕೈ ಬಿಡುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಎಸ್. ಎಂ. ಕೃಷ್ಣ ಸ್ಪಷ್ಟಪಡಿಸಿದ್ದಾರೆ.
ಕನ್ನಡದ ಜತೆಗೇ ಇಂಗ್ಲಿಷ್‌ಗೂ ಪ್ರಾಧಾನ್ಯತೆ ನೀಡಲಾಗುವುದು. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಾಗಬೇಕಾದರೆ ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳು ಹೆಚ್ಚು ಸಹಕಾರಿಯಾಗಿರುತ್ತವೆ ಎಂದು ಕೃಷ್ಣ ಹೇಳಿದರು. ಅವರು ಸೋಮವಾರ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ನ ವಜ್ರ ಮಹೋತ್ಸವ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ವೃತ್ತಿಪರ ಶಿಕ್ಷಣಕ್ಕಾಗಿ ವಿದೇಶೀ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದ್ದರಿಂದ ರಾಜ್ಯ ಸರಕಾರವು ಆಂಗ್ಲ ಭಾಷೆಯನ್ನು ಶಿಕ್ಷಣದಿಂದ ಕೈ ಬಿಡಬಾರದು ಎಂದು ಶಿಕ್ಷಣ ಸಮಿತಿ ಟ್ರಸ್ಟ್‌ನ ಅಧ್ಯಕ್ಷ ಎಂ. ಕೆ. ಪಾಂಡುರಂಗ ಶೆಟ್ಟಿ ಅವರು ಮಾಡಿದ ಮನವಿಗೆ ಪ್ರತಿಕ್ರಿಯಿಸುತ್ತಾ ಕೃಷ್ಣ ಈ ವಿಷಯ ತಿಳಿಸಿದರು.
ಗುಣಮಟ್ಟದ ಶಿಕ್ಷಣವನ್ನು ಇಂದಿನ ಮಕ್ಕಳಿಗೆ ನೀಡುವ ಅಗತ್ಯವನ್ನು ಒತ್ತಿ ಹೇಳಿದ ಮುಖ್ಯಮಂತ್ರಿಗಳು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಗುಣಮಟ್ಟ ಅತ್ಯಗತ್ಯ. ಅಲ್ಲದೆ ವಿಜ್ಞಾನ ಆಧಾರಿತ ಶಿಕ್ಷಣಕ್ಕೆ ರಾಜ್ಯಸರಕಾರ ಹೆಚ್ಚು ಆದ್ಯತೆ ನೀಡುತ್ತದೆ ಎಂದರು.
ಈ ಸಂದರ್ಭದಲ್ಲಿ ಎನ್‌ಎಂಕೆಆರ್‌ವಿ ಮಹಿಳಾ ಕಾಲೇಜು ಸಭಾಂಗಣಕ್ಕೆ ಕೃಷ್ಣ ಅವರು ಶಿಲಾನ್ಯಾಸ ಮಾಡಿ, ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಸಮಾರಂಭದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ












Click it and Unblock the Notifications