ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಸ್ಕೂಲು ಶಿಕ್ಷಕರಾಗಲು ಇನ್ನು ಮುಂದೆ ಪ್ರವೇಶ ಪರೀಕ್ಷೆ ಬರೆಯಬೇಕು

By Staff
|
Google Oneindia Kannada News

ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಹೈಸ್ಕೂಲುಗಳಿಗೆ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್‌.ವಿಶ್ವನಾಥ್‌ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಡನೆ ಮಾತಾಡುತ್ತಿದ್ದ ಸಚಿವರು, ಹೈಸ್ಕೂಲು ಶಿಕ್ಷಕರ ನೇಮಕಾತಿ ನಿಯಮಾವಳಿಗಳಲ್ಲಿ ತಿದ್ದುಪಡಿ ತರಲಾಗುವುದು. ಪ್ರವೇಶ ಪರೀಕ್ಷೆಯಲ್ಲಿ ಪಡೆಯುವ ಅಂಕಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರತಿಶತ 70ರಷ್ಟು ಆದ್ಯತೆ ನೀಡಲಾಗುವುದು ಎಂದರು.

ಮುಂದಿನ ಶೈಕ್ಷಣಿಕ ವರ್ಷದಲ್ಲಿ 60 ಹೊಸ ಟಿಸಿಎಚ್‌ ಕಾಲೇಜುಗಳಿಗೆ ಅನುಮತಿ ಕೊಟ್ಟಿದ್ದೇವೆ. ಇವುಗಳು ಬಾಗಿಲು ತೆರೆಯುವುದರಿಂದ ಟಿಸಿಎಚ್‌ ತರಪೇತಿಯಲ್ಲಿ ಡೊನೇಷನ್‌ ಭೂತ ಇಲ್ಲವಾಗಲಿದೆ. ವಿಜ್ಞಾನವನ್ನು ಬೋಧಿಸುವ ಟಿಸಿಎಚ್‌ ಕಾಲೇಜುಗಳಿಗೆ ಮಾತ್ರ ತಲಾ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅನುಮತಿ ಇರುತ್ತದೆ ಎಂದು ಹೇಳಿದರು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X