ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಬೆಂಗಳೂರಲ್ಲಿ ಹೊಸ ಎಂಜಿನಿಯರಿಂಗ್‌ ಕಾಲೇಜು ಸ್ಥಾಪನೆಗೆ ಅನುಮತಿ ಇಲ್ಲ’

By Staff
|
Google Oneindia Kannada News

ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತ ಹೊಸ ಎಂಜಿನಿಯರಿಂಗ್‌ ಕಾಲೇಜು ಸ್ಥಾಪನೆಗೆ ಅನುಮತಿ ನೀಡದಿರಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ವಿಷಯವನ್ನು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್‌ ಗುರುವಾರ ತಿಳಿಸಿದರು.

ಕಳೆದ ವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ನಿರ್ಧಾರ ತಳೆಯಲಾಗಿದ್ದು, ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಎಂಜಿನಿಯರಿಂಗ್‌ ಕಾಲೇಜು ಸ್ಥಾಪಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ 15ಕ್ಕೂ ಹೆಚ್ಚು ಅರ್ಜಿಗಳನ್ನು ತಿರಸ್ಕರಿಸಲಾಯಿತು ಎಂದು ತಿಳಿಸಿದರು.

ಹೊಸ ಎಂಜಿನಿಯರಿಂಗ್‌ ಕಾಲೇಜುಗಳನ್ನು ಸ್ಥಾಪಿಸಲು 29 ಅರ್ಜಿಗಳು ಸರಕಾರಕ್ಕೆ ಬಂದಿವೆ. ಬೆಂಗಳೂರಿನಲ್ಲಿ ಈ ಹೊತ್ತು 56 ಎಂಜಿನಿಯರಿಂಗ್‌ ಕಾಲೇಜುಗಳಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತ್ತಷ್ಟು ಹೊಸ ಎಂಐನಿಯರಿಂಗ್‌ ಕಾಲೇಜು ಸ್ಥಾಪನೆಗೆ ಅನುಮತಿ ನೀಡದಿರಲು ಸರಕಾರ ತೀರ್ಮಾನಿಸಿತು ಎಂದು ವಿವರಿಸಿದರು.

ಒಂದೊಮ್ಮೆ ಈ ಶಿಕ್ಷಣ ಸಂಸ್ಥೆಗಳು ಬೆಂಗಳೂರಿನ ಹೊರಗೆ ಅಂದರೆ ರಾಜ್ಯದ ಬೇರೆ ಊರುಗಳಲ್ಲಿ ಎಂಜಿನಿಯರಿಂಗ್‌ ಕಾಲೇಜು ಸ್ಥಾಪಿಸಲು ಉತ್ಸುಕವಾಗಿದ್ದರೆ, ಅಂತಹ ಸಂಸ್ಥೆಗಳಿಗೆ ಅನುಮತಿ ನೀಡಲಾಗುವುದು ಎಂದೂ ಪರಮೇಶ್ವರ್‌ ತಿಳಿಸಿದರು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X