• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚುನಾವಣೆಯಲ್ಲಿ ದೇವೇಗೌಡ ಲೆಕ್ಕಕ್ಕಿಲ್ಲ- ಅನಂತಕುಮಾರ್‌ ಲೇವಡಿ

By Staff
|

ಬೆಂಗಳೂರು: ಫೆ.21 ರ ಕನಕಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು , ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮೂರನೇ ಸ್ಥಾನ ಗಳಿಸಲಿದ್ದಾರೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಚ್‌.ಎನ್‌.ಅನಂತಕುಮಾರ್‌ ಭವಿಷ್ಯ ನುಡಿದಿದ್ದಾರೆ.

ಚುನಾವಣೆಯಲ್ಲಿ ಎಸ್‌.ಎಂ.ಕೃಷ್ಣ ನೇತೃತ್ವದ ಸರ್ಕಾರ ಅವ್ಯವಹಾರ ನಡೆಸುವ ಕುರಿತು ಗುಮಾನಿ ವ್ಯಕ್ತಪಡಿಸಿದ ಅನಂತಕುಮಾರ್‌, ಕೇಂದ್ರ ಪೊಲೀಸ್‌ ಪಡೆಗಳನ್ನು ರಕ್ಷಣೆಗೆ ನಿಯೋಜಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದರು. ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರ ಚುನಾವಣೆಯನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯಿದೆ. ಹಿಂಸಾಚಾರ ನಡೆಯುವ ಸಾಧ್ಯತೆಗಳೂ ಇದ್ದು , ಚುನಾವಣೆ ಪ್ರಕ್ರಿಯೆ ಸುಸೂತ್ರವಾಗಿ ಜರುಗಲು ವಿಶೇಷ ಘಟಕವೊಂದನ್ನು ರಚಿಸುವಂತೆ ಒತ್ತಾಯಿಸಿದ ಅನಂತಕುಮಾರ್‌, ಚುನಾವಣೆಯಲ್ಲಿ ಎಲೆಕ್ಟ್ರಾನಿಕ್‌ ಮತ ಯಂತ್ರಗಳ ಬಳಕೆ ಹಾಗೂ ಮತದಾರನು ತನ್ನ ಗುರುತನ್ನು ಸಾಬೀತುಪಡಿಸಲು ಒದಗಿಸಬೇಕಾದ ದಾಖಲೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ದೇವೇಗೌಡ ಹಾಗೂ ಎಸ್‌.ಎಂ.ಕೃಷ್ಣ ಅವರ ಭವಿಷ್ಯವನ್ನು ಕನಕಪುರ ಚುನಾವಣೆ ನಿರ್ಧರಿಸಲಿದೆ ಎಂದು ಅಭಿಪ್ರಾಯ ಪಟ್ಟ ಅವರು, ತಮ್ಮ ಪಕ್ಷದ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. 1991 ರಿಂದ 1999 ರ ಅವಧಿಯಲ್ಲಿ ಪಕ್ಷ ತನ್ನ ಸಾಮರ್ಥ್ಯವನ್ನು ಗಣನೀಯವಾಗಿ ವೃದ್ಧಿಸಿಕೊಂಡಿದೆ ಎಂದು ಅನಂತಕುಮಾರ್‌ ಹೇಳಿದರು.

(ಪಿಟಿಐ)

ಮುಖಪುಟ / ಕನಕಪುರವೆಂಬ ಕುರುಕ್ಷೇತ್ರ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more