ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಿದರೆ ಎನ್‌ಡಿಎ ತೊರೆಯುವೆ -ಫಾರೂಕ್‌

By Staff
|
Google Oneindia Kannada News

ಜಮು ್ಮ : ಕೇಂದ್ರ ಸರಕಾರವು ಪಾಕಿಸ್ತಾನದೊಡನೆ ಮಾತುಕತೆ ನಡೆಸಿದರೆ, ಅಥವಾ ಗಡಿಯಿಂದ ಸೇನೆಯನ್ನು ಹಿಂತೆಗೆದುಕೊಂಡರೆ ಎನ್‌ಡಿಎ ಕೂಟದಿಂದ ತಾನು ತಕ್ಷಣವೇ ಹೊರ ಬರುವುದಾಗಿ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ, ನ್ಯಾಷನಲ್‌ ಕಾನ್ಫರೆನ್ಸ್‌ನ ಅಧ್ಯಕ್ಷ ಡಾ. ಫಾರೂಕ್‌ ಅಬ್ದುಲ್ಲಾ ಬೆದರಿಸಿದ್ದಾರೆ.

ಅವರು ಮಂಗಳವಾರ ಜಮ್ಮು ಲೋಕಸಭೆ ಕ್ಷೇತ್ರದ ಮರುಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು. ಇಲ್ಲಿ ನನ್ನ ಜನರು ಪ್ರತಿದಿನ ಪಾಕ್‌ ಪ್ರೇರಿತ ಭಯೋತ್ಪಾದನೆಗೆ ಬಲಿಯಾಗುತ್ತಿದ್ದಾರೆ. ಅಂತಹ ದೇಶದೊಂದಿಗೆ ಮಾತುಕತೆಯನ್ನು ಪುನರಾರಂಭಿಸುವುದು ನನಗೆ ಕೊಂಚವೂ ಇಷ್ಟವಿಲ್ಲ ಎಂದು ಫಾರೂಕ್‌ ಹೇಳಿದ್ದಾರೆ.

ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಯನ್ನು ಹಿಂತೆಗೆದುಕೊಂಡ ನಂತರವಷ್ಟೇ ಮಾತುಕತೆಯನ್ನು ಪುನರಾರಂಭಿಸಬೇಕು. ಈ ನಿಟ್ಟಿನಲ್ಲಿ ಭಾರತ ದೃಢ ನಿರ್ಧಾರ ತೆಗೆದುಕೊಂಡು ಪಾಕ್‌-ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಫಾರೂಕ್‌, ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಸಲಹೆ ಮಾಡಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X