ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಹೊರನಾಡ ಕನ್ನಡಿಗರಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ವಾಟಾಳ್‌ ಒತ್ತಾಯ

By Staff
|
Google Oneindia Kannada News

ಮಂಗಳೂರು : ಗಡಿ ಪ್ರದೇಶದ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ‘ಹೊರನಾಡ ಕನ್ನಡಿಗರ ಅಭಿವೃದ್ಧಿ ಪ್ರಾಧಿಕಾರ’ ಸ್ಥಾಪಿಸುವಂತೆ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗಡಿ ಪ್ರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರ ಹಿತಾಸಕ್ತಿ ರಕ್ಷಣೆಗೆ ದುಡಿಯಲು ಹೊಸದಾಗಿ ರಚಿಸುವ ಪ್ರಾಧಿಕಾರಕ್ಕೆ ವಿಶೇಷ ಸವಲತ್ತುಗಳನ್ನು ಕಲ್ಪಿಸಬೇಕು. ಪ್ರತಿವರ್ಷದ ಆಯವ್ಯಯದಲ್ಲಿ 500 ಕೋಟಿ ರುಪಾಯಿಗಳನ್ನು ಗಡಿ ಭಾಗಗಳ ಕನ್ನಡಿಗರ ಅಭಿವೃದ್ಧಿಗೆ ಸರ್ಕಾರ ಮೀಸಲಿಡಬೇಕು ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್‌ ನಾಗರಾಜ್‌ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನೇತೃತ್ವದ ಸರ್ಕಾರವನ್ನು ಆಗ್ರಹ ಪಡಿಸಿದರು.

ರಾಜ್ಯದಲ್ಲಿ ಕನ್ನಡವನ್ನು ಅಧಿಕೃತ ಭಾಷೆಯಾಗಿ ಘೋಷಿಸುವ ಮಧ್ಯಂತರ ವರದಿಯನ್ನು ಅನುಷ್ಠಾನಗೊಳಿಸುವ ವಿಷಯದಲ್ಲಿ ರಾಜ್ಯ ಸರ್ಕಾರದ ಮೌನವನ್ನು ವಾಟಾಳ್‌ ನಾಗರಾಜ್‌ ಕಟುವಾಗಿ ಟೀಕಿಸಿದರು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X