ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿ : ಕುಡಿತಿನಿ ಶಾಖೋತ್ಪನ್ನ ಘಟಕಕ್ಕೆ ಮಾರ್ಚ್‌ 2ರಂದು ಶಿಲಾನ್ಯಾಸ

By Staff
|
Google Oneindia Kannada News

ಬಳ್ಳಾರಿ: 2500 ಕೋಟಿ ರುಪಾಯಿ ವೆಚ್ಚದಲ್ಲಿ ಬಳ್ಳಾರಿ ಜಿಲ್ಲೆಯ ಕುಡುತಿನಿಯಲ್ಲಿ ಸ್ಥಾಪನೆಯಾಗಲಿರುವ 250 ಮೆಗಾವ್ಯಾಟ್‌ ಸಾಮರ್ಥ್ಯದ ಎರಡು ಘಟಕಗಳ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರಕ್ಕೆ ಮಾರ್ಚ್‌ 2 ರಂದು ಶಿಲಾನ್ಯಾಸ ನೆರವೇರಲಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಜಯಭೇರಿ ಬಾರಿಸಿದ್ದ ಹಾಗೂ ಕೇಂದ್ರ ಲೋಕಸಭೆಯ ಪ್ರತಿಪಕ್ಷದ ನಾಯಕಿ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧೀ ಅವರು ಈ ವಿದ್ಯುತ್‌ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ವಿಷಯವನ್ನು ಕರ್ನಾಟಕ ವಿದ್ಯುತ್‌ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಜ್ಯೋತಿ ರಾಮಲಿಂಗಂ ತಿಳಿಸಿದ್ದಾರೆ.

ಸಂಸತ್‌ ಸದಸ್ಯರಾದ ಕೆ.ಸಿ. ಕೊಂಡಯ್ಯ, ಕೋಳೂರು ಬಸವನಗೌಡ, ಕೆ.ಪಿ.ಸಿ.ಸಿ. ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಶಾಸಕ ಸಿಚಾಜ್‌ ಶೇಖ್‌ ಅವರ ಜೊತೆ ಘಟಕದ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X