• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರಸೇವಕರಿದ್ದ ರೈಲಿಗೆ ಬೆಂಕಿ : ಸತ್ತವರ ಸಂಖ್ಯೆ 57ಕ್ಕೆ ಏರಿಕೆ

By Staff
|

ಅಹ್ಮದಾಬಾದ್‌: ಬುಧವಾರ ಬೆಳಗ್ಗೆ ಮುಸ್ಮಿಮರೇ ಹೆಚ್ಚಾಗಿರುವ ಗೋದ್ರಾ ಪ್ರದೇಶದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ ರೈಲಿನ ಚೈನ್‌ ಎಳೆದು ನಿಲ್ಲಿಸಿ, ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕನಿಷ್ಠ 57 ಕರಸೇವಕರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ಸಬರ್‌ಮತಿ ಎಕ್ಸ್‌ಪ್ರೆಸ್‌ ರೈಲು ಗಾಡಿಯಲ್ಲಿ ರಾಮಭಜನೆ ಮಾಡುತ್ತಾ, ರಾಮ ದೇಗುಲದ ಪರ ಘೋಷಣೆ ಕೂಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗಳಿಗೆ ಪೆಟ್ರೋಲ್‌ ಬಾಂಬ್‌ ಹಾಕಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, 4 ಬೋಗಿಗಳು ಬೆಂಕಿಗಾಹುತಿಯಾಗಿವೆ. ಈ ಬೋಗಿಗಳಲ್ಲಿದ್ದ ಪ್ರಯಾಣಿಕರಲ್ಲಿ 57 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ಈ ಘಟನೆಯ ತರುವಾಯ ಪಟ್ಟಣದಲ್ಲಿ ಕರ್ಫ್ಯೂ ಹೇರಲಾಗಿದ್ದರೂ, ಎರಡು ಕೋಮುಗಳ ನಡುವೆ ಭಾರೀ ಪ್ರಮಾಣದ ಘರ್ಷಣೆ ನಡೆಯುತ್ತಿದೆ. ಕೋಮುಗಲಭೆ ಹತ್ತಿಕ್ಕುವ ಸಲುವಾಗಿ ದುಷ್ಕರ್ಮಿಗಳನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಲು ಆದೇಶ ನೀಡಲಾಗಿದೆ.

ಬುಧವಾರ ಬೆಳಗ್ಗೆ ಸುಮಾರು 8-30ರ ಸಮಯದಲ್ಲಿ ಈ ದುಷ್ಕರ್ಮಿಗಳು ರೈಲಿನ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದರು. ಈ ಘಟನೆಯಲ್ಲಿ ಮೃತಪಟ್ಟಿರುವವರು ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದೂ ಅಸಾಧ್ಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಧಾನಿ ಖಂಡನೆ : ಅುೂೕಧ್ಯೆಯಿಂದ ಹಿಂತಿರುಗುತ್ತಿದ್ದ ಕರಸೇವಕರು ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ನಡೆದಿರುವ ಈ ದಾಳಿಯನ್ನು ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಖಂಡಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಶಾಂತಿಯಿಂದ ವರ್ತಿಸುವಂತೆ ಅವರು ಜನತೆಗೆ ಮನವಿ ಮಾಡಿದ್ದಾರೆ. ರಾಮಮಂದಿರ ನಿರ್ಮಾಣ ವಿಷಯವನ್ನು ಕೈಬಿಡುವಂತೆ ಅವರು ವಿಶ್ವಹಿಂದೂ ಪರಿಷತ್‌ಗೆ ಕೋರಿದ್ದಾರೆ.

ಅಡ್ವಾಣಿ ಎಚ್ಚರಿಕೆ : ಕರಸೇವಕರ ಸಾವಿಗೆ ಕಾರಣವಾದ ವಿಧ್ವಂಸಕ ದಾಳಿಯನ್ನು ಉಗ್ರವಾಗಿ ಖಂಡಿಸಿರುವ ಕೇಂದ್ರ ಗೃಹ ಸಚಿವ ಎಲ್‌.ಕೆ. ಅಡ್ವಾಣಿ ಅವರು, ರಾಮ ಮಂದಿರ ನಿರ್ಮಾಣದಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಕಾರಣ ಆ ಯೋಜನೆಯನ್ನು ಕೈಬಿಡುವಂತೆ ಕೋರಿದ್ದಾರೆ.

ಪಟ್ಟು ಹಿಡಿದು ರಾಮಮಂದಿರ ನಿರ್ಮಾಣಕ್ಕೆ ಕೈಹಾಕಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಆದರೆ, ಈ ಮಧ್ಯೆ ವಿಎಚ್‌ಪಿ ಹೇಳಿಕೆ ನೀಡಿ, ಯಾವುದೇ ಶಕ್ತಿಯೂ ರಾಮಮಂದಿರ ನಿರ್ಮಾಣವನ್ನು ತಡೆಯಲಾರದು, ನಾವು ಮಂದಿರ ಕಟ್ಟೇ ತೀರುತ್ತೇವೆ ಎಂದು ಹೇಳಿದ್ದಾರೆ.

(ಪಿ.ಟಿ.ಐ)

ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more