ಹೆಲಿಕಾಫ್ಟರ್‌ಅಪಘಾತದಲ್ಲಿ ಲೋಕಸಭಾಧ್ಯಕ್ಷ ಜಿ.ಎಂ.ಸಿ.ಬಾಲಯೋಗಿ ನಿಧನ

ನವದೆಹಲಿ : ಲೋಕಸಭಾಧ್ಯಕ್ಷ ಜಿ.ಎಂ.ಸಿ. ಬಾಲಯೋಗಿ ಅವರು ಆಂಧ್ರ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಹೆಲಿಕಾಫ್ಟರ್‌ ಅಪಘಾತದಲ್ಲಿ ನಿಧನರಾಗಿದ್ದಾರೆ.

ಭೀಮಾವರಂನಿಂದ ಹೈದರಾಬಾದ್‌ಗೆ ಬಾಲಯೋಗಿ ಅವರು ಪ್ರಯಾಣಿಸುತ್ತಿದ್ದ ಖಾಸಗಿ ಹೆಲಿಕಾಫ್ಟರ್‌ ಕೈಕಲೂರು ಬಳಿ ತೆಂಗಿನ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಳಗ್ಗೆ 07.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಾಲಯೋಗಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಅವರ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಕೆ.ಎಸ್‌.ರಾಜು ಹಾಗೂ ಹೆಲಿಕಾಫ್ಟರ್‌ ಪೈಲಟ್‌ ಕೂಡ ಸಾವನ್ನಪ್ಪಿದ್ದಾರೆ.

ಮಾರ್ಚ್‌ 2 ರಂದು ಏಲೂರುನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಬಾಲಯೋಗಿ ಅವರು, ಶ್ರೀ ಆರ್ಥರ್‌ ಕಾಟನ್‌ ರೈತು ಹಾಲ್‌ ಹಾಗೂ ಅಂಬೇಡ್ಕರ್‌ ಭವನವನ್ನು ಉದ್ಘಾಟಿಸಿದ್ದರು. 1998 ರ ಮಾರ್ಚ್‌ 24 ರಂದು ಬಾಲಯೋಗಿ ಅವರು ಲೋಕಸಭೆಯ ಸ್ಪೀಕರ್‌ ಆಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು.

(ಪಿಟಿಐ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+