ಚಂದ್ರಗುತ್ತಿ ಎಲ್ಲಮ್ಮನ ಜಾತ್ರೆಗೆ ನಿಷೇಧ ; ಪೂಜೆಗಷ್ಟೇ ಅವಕಾಶ

ಶಿವಮೊಗ್ಗ : ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಈ ತಿಂಗಳ 20ರಿಂದ ಐದು ದಿನಗಳ ಕಾಲ ನಡೆಯಬೇಕಿದ್ದ ಶ್ರೀ ರೇಣುಕಾಂಬ ದೇವಿ ಜಾತ್ರೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಪೂಜಾ ವಿಧಿವಿಧಾನಗಳನ್ನು ಮಾತ್ರ ನಡೆಸಲು ಅನುಮತಿ ನೀಡಲಾಗಿದ್ದು, ಸಾಮೂಹಿಕ ಜಾತ್ರೆಯನ್ನು ನಿಷೇಧಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಜಾತ್ರೆಯ ಸಂದರ್ಭದಲ್ಲಿ ಕೆಲವು ಭಕ್ತರು ನದಿಯಲ್ಲಿ ಸ್ನಾನ ಮಾಡಿ ಬೆತ್ತಲೆ ಸೇವೆ ಹರಕೆ ಸಲ್ಲಿಸುವ ಸಂಪ್ರದಾಯವನ್ನು ಆಚರಿಸಲು 1986ರಲ್ಲಿ ಪ್ರಯತ್ನಿಸಿದ್ದು ಗಲಾಟೆಗೆ ಎಡೆ ಮಾಡಿಕೊಟ್ಟಿತ್ತು. ಈ ಘಟನೆಯ ವಿಚಾರಣೆ ನಡೆಸಿದ ಚೆನ್ನವೀರಪ್ಪ ವಿಚಾರಣಾ ಆಯೋಗವು ಚಂದ್ರಗುತ್ತಿ ಜಾತ್ರೆಯಲ್ಲಿ ಬೆತ್ತಲೆ ಸೇವೆಯನ್ನು ತಡೆಗಟ್ಟಬೇಕಾದರೆ, ಜಾತ್ರೆಯನ್ನು ಕೆಲವು ವರ್ಷಗಳ ಕಾಲ ನಿಷಧಿಸಿ, ಭಕ್ತರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಶಿಫಾರಸು ಮಾಡಿತ್ತು .

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+