ಬಸವಕಲ್ಯಾಣದಲ್ಲಿ ಮೇ.14ರಿಂದ ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಬೀದರ್ : ಈ ಬಾರಿಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 14 ಮತ್ತು 15ರಂದು ಬಸವಕಲ್ಯಾಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸಿದ್ರಾಮಪ್ಪ ಮಾಸಿಮಾದೆ ಅವರ ಪ್ರಕಟಣೆ ತಿಳಿಸಿದೆ.
ಆದರೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಇನ್ನೂ ನಡೆದಿಲ್ಲ. ಸದ್ಯದಲ್ಲಿಯೇ ಜಿಲ್ಲಾ ಸಾಹಿತ್ಯ ಪರಿಷತ್ ಮತ್ತೊಮ್ಮೆ ಸಭೆ ಸೇರಿ ಅಧ್ಯಕ್ಷರನ್ನು ಆಯ್ಕೆ ಮಾಡಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ನಾಗಶೆಟ್ಟಿ ಧರ್ಮಾಪುರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಇದು ಏಳನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನವಾಗಿದ್ದು, ಎರಡು ದಿನಗಳ ಅವಧಿಯಲ್ಲಿ ಚರ್ಚಿಸಬೇಕಾದ ವಿಷಯಗಳು ಮತ್ತು ಆಯೋಜಿಸಬೇಕಿರುವ ಕಾರ್ಯಕ್ರಮಗಳ ಬಗ್ಗೆಯೂ ಮುಂದಿನ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ನಾಗಶೆಟ್ಟಿ ತಿಳಿಸಿದರು.
ಬಸವಕಲ್ಯಾಣ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಜನವಾಡದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಏಪ್ರಿಲ್ 11 ಮತ್ತು 12ರಂದು ಸಮ್ಮೇಳನ ನಡೆಯಲಿದೆ. ಇತ್ತೀಚೆಗೆ ಬೀದರ್‌ನಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆಗಳು ಹೆಚ್ಚುತ್ತಿರುವುದು ಸಂತೋಷದಾಯಕ ವಿಚಾರ ಎಂದು ಸಿದ್ರಾಮಪ್ಪ ಅವರು ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.
(ಇನ್ಫೋವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications