ಮೈಸೂರು: ವರಾಹ, ಭೈರವ, ಗಣಪ, ಹನುಮನಿಗೆ ಖುಲಾಯಿಸಿದ ಅದೃಷ್ಟ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆಯ ಆಡಳಿತ ವ್ಯಾಪ್ತಿಗೆ ಸೇರಿದ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ 78 ಲಕ್ಷ ರುಪಾಯಿಗಳ ಯೋಜನೆಯಾಂದನ್ನು ರೂಪಿಸಿದೆ.
ಮೈಸೂರಿಗೆ ಆಗಮಿಸುವ ಪ್ರವಾಸಿಗರನ್ನು ಸೆಳೆಯಲೆಂದು ಸಾಂಸ್ಕೃತಿಕ ಹಿನ್ನೆಲೆಯುಳ್ಳ ದೇವಸ್ಥಾನಗಳನ್ನು ಜೀರ್ಣೋದ್ಧಾರಗೊಳಿಸಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ಕೆಲ ದೇಗುಲಗಳ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದೆ. ಕಾಮ ಕಾಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ 2.10 ಲಕ್ಷ ರುಪಾಯಿಗಳ ವೆಚ್ಚದಲ್ಲಿ ಈಗಾಗಲೇ ಪೂರ್ಣಗೊಂಡಿದೆ ಎಂದು ಶಾಸಕ ಎ.ರಾಮದಾಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರ ವಿವರ ಇಂತಿದೆ-
- 10.35 ಲಕ್ಷ ರುಪಾಯಿ ವೆಚ್ಚದಲ್ಲಿ ಗಾಯತ್ರಿ ದೇವಸ್ಥಾನ ಜೀರ್ಣೋದ್ಧಾರ
- ಶ್ವೇತ ವರಾಹ ಸ್ವಾಮಿ ದೇಗುಲ ಜೀರ್ಣೋದ್ಧಾರಕ್ಕೆ 15 ಲಕ್ಷ ರು.
- ಹರಿಶ್ಚಂದ್ರ ರಸ್ತೆಯ ಭೈರವೇಶ್ವರ ಸ್ವಾಮಿ ದೇಗುಲ ಜೀರ್ಣೋದ್ಧಾರಕ್ಕೆ 2 ಲಕ್ಷ ರು.
- ಅರಮನೆ ಉತ್ತರ ಭಾಗದಲ್ಲಿರುವ ಕೋಟೆ ಗಣಪತಿ ದೇಗುಲ ಜೀರ್ಣೋದ್ಧಾರಕ್ಕೆ 1.09 ಲಕ್ಷ ರು.
- ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ 4.35 ಲಕ್ಷ ರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications