ಮಾರ್ಚ್ 21ರಂದು ಎಸ್. ಎಂ. ಕೃಷ್ಣರಿಂದ ರಾಜ್ಯ ಆಯವ್ಯಯ ಪತ್ರ ಮಂಡನೆ
ಬೆಂಗಳೂರು : ಮಾರ್ಚ್ 21ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು 2002-2003ನೇ ಸಾಲಿನ ಆಯವ್ಯಯ ಪತ್ರವನ್ನು ವಿಧಾನ ಸಭೆಯಲ್ಲಿ ಮಂಡಿಸುವರು.
ಬಜೆಟ್‌ಗೆ ಪೂರ್ವಭಾವಿಯಾಗಿ , ಹಣಕಾಸು ಅಧಿಕಾರಿಗಳೊಂದಿಗೆ ಹಾಗೂ ವಾಣಿಜ್ಯ ತೆರಿಗೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಕೃಷ್ಣ ಅವರು ಬುಧವಾರ ವಿಧಾನ ಸೌಧದಲ್ಲಿ ಮಾತುಕತೆ ನಡೆಸಿದರು.
ಕೃಷ್ಣ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಂಡಿಸುತ್ತಿರುವ ಮೂರನೇ ಬಜೆಟ್ ಇದಾಗಿದೆ. ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿರುವ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯ ಯೋಜನೆಗಳಿಗೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡುವ ನಿರೀಕ್ಷೆಯಿದೆ.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ












Click it and Unblock the Notifications