ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಆಸ್ಪತ್ರೆಗಳಿಗೆ 550 ವೈದ್ಯರು, ಪಿಎಚ್‌ಸಿಗಳಿಗೆ ಹೆಚ್ಚುವರಿ ಹಣ

By Staff
|
Google Oneindia Kannada News

ಬೆಂಗಳೂರು : ಔಷಧಿ ಸಾಮಗ್ರಿಗಳನ್ನು ಖರೀದಿಸಲು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡುವ ಹಣವನ್ನು 75 ಸಾವಿರ ರುಪಾಯಿಗಳಿಂದ 85 ಸಾವಿರ ರುಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಎ.ಬಿ.ಮಲಕರೆಡ್ಡಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿಗಳ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೆಚ್ಚುವರಿ 10 ಸಾವಿರ ರುಪಾಯಿ ನೀಡಲಾಗುವುದು ಎಂದು ರಾಜ್ಯ ವಿಧಾನ ಪರಿಷತ್ತಿನಲ್ಲಿ ಮಲಕರೆಡ್ಡಿ ಮಂಗಳವಾರ ತಿಳಿಸಿದರು. ಸರ್ಕಾರಿ ಆಸ್ಪತ್ರೆಗಳಿಗೆ ಪ್ರಸಕ್ತ ವರ್ಷ 550 ವೈದ್ಯರನ್ನು ನೇಮಿಸಿಕೊಳ್ಳಲಾಗುವುದು ಎಂದು ಪ್ರಶ್ನೋತ್ತರ ಅವಧಿಯಲ್ಲಿ ಪಿ. ರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು ಹೇಳಿದರು.

ಪಾರ್ಟ್‌ ಟೈಂ ಉಪನ್ಯಾಸಕರ ಹುದ್ದೆ ಶೀಘ್ರದಲ್ಲೇ ಕ್ರಮಬದ್ಧ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ 1144 ಅರೆ ಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಶೀಘ್ರದಲ್ಲೇ ಕ್ರಮಬದ್ಧಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಶಶಿಲ್‌ ಜಿ. ನಾಮೋಶಿ ಅವರ ಪ್ರಶ್ನೆಗೆ ಉತ್ತರಿಸಿದರು. ಜಯದೇವ ಹೃದ್ರೋಗ ಸಂಸ್ಥೆಯ ಹಳೆಯ ಕಟ್ಟಡದಲ್ಲಿ ನೆಫ್ರಾಲಜಿ ಹಾಗೂ ಯೂರಾಲಜಿ ಸಂಸ್ಥೆಯನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ ಎಂದು ಕಾಂಗ್ರೆಸ್‌ನ ಪ್ರಭಾಕರ ಬಿ.ಕೋರೆ ಅವರ ಪ್ರಶ್ನೆಗೆ ಪರಮೇಶ್ವರ್‌ ತಿಳಿಸಿದರು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X