ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

36 ಸಾವಿರ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೇ ಬಯಲೇ ಶೌಚಾಲಯ !

By Staff
|
Google Oneindia Kannada News

ಬೆಂಗಳೂರು : ರಾಜ್ಯದ 36 ಸಾವಿರಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಶೌಚಾಲಯದ ವ್ಯವಸ್ಥೆ ಹೊಂದಿಲ್ಲ ಎಂದು ಶಿಕ್ಷಣ ಸಚಿವ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ.

34 ಸಾವಿರದ 524 ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ 1764 ಪ್ರೌಢ ಶಾಲೆಗಳು ಶೌಚಾಲಯ ವ್ಯವಸ್ಥೆ ಹೊಂದಿಲ್ಲ ಎಂದು ಮಂಗಳವಾರ ವಿಧಾನ ಪರಿಷತ್‌ನಲ್ಲಿ ಜಾತ್ಯತೀತ ಜನತಾದಳದ ಪ್ರಫುಲ್ಲಾ ಮಧುಕರ್‌ ಅವರ ಪ್ರಶ್ನೆಗೆ ಉತ್ತರಿಸುತ್ತ ವಿಶ್ವನಾಥ್‌ ಹೇಳಿದರು.

ಹೆಣ್ಣು ಮಕ್ಕಳ ಶಾಲೆಗಳಿಗೆಂದು ಶೌಚಾಲಯ ನಿರ್ಮಿಸುವ ಯಾವುದೇ ಯೋಜನೆ ಸರ್ಕಾರದ ವ್ಯಾಪ್ತಿಯಲ್ಲಿಲ್ಲ . ಆದರೆ, ರಾಜ್ಯ ಯೋಜನೆ ಹಾಗೂ ಕೇಂದ್ರ ಅನುದಾನಿತ ಪಿ.ಎಂ.ಜಿ.ವೈ. ಯೋಜನೆಯಡಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶೌಚಾಲಯ ಮತ್ತು ಕುಡಿಯುವ ನೀರನ್ನು ಒದಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ಸ್ವಷ್ಟನೆ ನೀಡಿದರು.

ಮುಖ್ಯಮಂತ್ರಿ ಚಂದ್ರು ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶಾಲಾ ಕೊಠಡಿಗಳ ಕೊರತೆ ಇರುವುದನ್ನು ಒಪ್ಪಿಕೊಂಡರು. ರಾಜ್ಯದಲ್ಲಿ 43 ಸಾವಿರದ 259 ಸರ್ಕಾರಿ ಪ್ರಾಥಮಿಕ ಹಾಗೂ 2818 ಸರ್ಕಾರಿ ಪ್ರೌಢಶಾಲೆಗಳಿವೆ. ಈ ಪೈಕಿ ಪ್ರಾಥಮಿಕ ಶಾಲೆಗಳಿಗೆ 29 ಸಾವಿರದ 886 ಕೊಠಡಿಗಳ ಹಾಗೂ ಪ್ರೌಢಶಾಲೆಗಳಿಗೆ 6762 ಕೊಠಡಿಗಳ ಕೊರತೆಯಿದೆ. ಸರ್ಕಾರದ ಆರ್ಥಿಕ ಸ್ಥಿತಿಯನ್ನು ಅನುಸರಿಸಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ ಎಂದು ವಿಶ್ವನಾಥ್‌ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X