ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದ್ಯದಲ್ಲೇ ಕನ್ನಡ ಸಂಸ್ಕೃತಿ ಮತ್ತು ಪರಂಪರೆಗಳ ಮಾಹಿತಿ ಆನ್‌ಲೈನ್‌ನಲ್ಲಿ

By Staff
|
Google Oneindia Kannada News

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸದ್ಯದಲ್ಲಿಯೇ ಪ್ರವಾಸೋದ್ಯಮ ಮಾಹಿತಿಗಳನ್ನೊಳಗೊಂಡ ವೆಬ್‌ಸೈಟ್‌ ಆರಂಭಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್‌ ತಿಳಿಸಿದ್ದಾರೆ.

ಹೊಸದಾಗಿ ಆರಂಭಿಸಲಿರುವ ವೆಬ್‌ಸೈಟ್‌ನಲ್ಲಿ ರಾಜ್ಯದ ಸಾಂಸ್ಕೃತಿಕ ಕೇಂದ್ರಗಳು, ಪರಂಪರೆಯನ್ನು ಬಿಂಬಿಸುವ ಪ್ರವಾಸಿ ಕ್ಷೇತ್ರಗಳ ಬಗ್ಗೆ ಮಾಹಿತಿಗಳನ್ನು ಅಳವಡಿಸಲಾಗುವುದು. ‘ಮಾಹಿತಿ ತಂತ್ರಜ್ಞಾನದ ಮೂಲಕ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಬಹುದು. ಮುಖ್ಯವಾಗಿ ಅನಿವಾಸೀ ಭಾರತೀಯರಿಗೆ ಅನುಕೂಲವಾಗುವಂತೆ ವೆಬ್‌ಸೈಟ್‌ ನಿರ್ಮಾಣ ಯೋಜನೆ ತಯಾರಿಸಬೇಕು’ ಎಂದು ಸಚಿವೆ ಅಭಿಪ್ರಾಯಪಟ್ಟರು.

ಅನಿವಾಸಿ ಭಾರತೀಯರಿಗೆ ಕನ್ನಡ ಸಂಸ್ಕೃತಿಯನ್ನು ತಲುಪಿಸುವ ಕಾರ್ಯವನ್ನು ಐಟಿ ಕ್ಷೇತ್ರ ಮಾಡಬಲ್ಲುದು ಎಂದ ಸಚಿವೆ, ಕನ್ನಡ ಮತ್ತು ಸಂಸ್ಕೃತಿಇಲಾಖೆಗೆ ಈ ಬಾರಿಯ ಬಜೆಟ್‌ನಲ್ಲಿ ನೀಡಿದ ಹೆಚ್ಚುವರಿ ಅನುದಾನದಲ್ಲಿ 5 ಕೋಟಿ ರೂಪಾಯಿಯನ್ನು ಕನ್ನಡ ಸಾಫ್ಟ್‌ವೇರ್‌ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X