• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯಕ್ಕೆ ಎರಡನೇ ರಾಜಧಾನಿ ಬೇಕು, ಅದು ದಾವಣಗೆರೆಯಾಗಬೇಕು!

By oneindia staff
|

ದಾವಣಗೆರೆ : ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸಾ.ಶಿ.ಮರುಳಯ್ಯ ಅವರು ದಾವಣಗೆರೆ ನಗರವನ್ನು ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ಹೈಕೋರ್ಟ್‌ ಪೀಠ ಸ್ಥಾಪನೆಯ ಚರ್ಚೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಎರಡನೇ ರಾಜಧಾನಿ ನಗರದ ಬಗೆಗೂ ಚಿಂತನೆಗಳು ನಡೆಯಲಿ ಎಂದು ದಾವಣಗೆರೆಯ ತೊಗಟವೀರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಉತ್ಸವದ ಅಂಗವಾಗಿ ಭಾನುವಾರ ನಡೆದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡುತ್ತಿದ್ದ ಸಾ.ಶಿ. ಮರುಳಯ್ಯ ಹೇಳಿದರು.

ದಾವಣಗೆರೆಯು ರಾಜ್ಯದ ಕೇಂದ್ರ ಭಾಗದಲ್ಲಿದ್ದು ರಾಜಧಾನಿ ನಗರವಾಗುವ ಅರ್ಹತೆ ಪಡೆದಿದೆ. ಆಡಳಿತದ ವಿಕೇಂದ್ರಿಕರಣದಿಂದ ಅಭಿವೃದ್ಧಿ ಸಾಧ್ಯ ಎನ್ನುವ ಈ ದಿನಗಳಲ್ಲಿ ದಾವಣಗೆರೆಯನ್ನು ಎರಡನೇ ರಾಜಧಾನಿ ನಗರವನ್ನಾಗಿ ಅಂಗೀಕರಿಸುವುದು ಹೆಚ್ಚು ಅರ್ಥಪೂರ್ಣ. ವಾಣಿಜ್ಯ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ದಾವಣಗೆರೆಗೆ ಈವರೆಗೆ ಸರಿಯಾದ ಮಾನ್ಯತೆ ದೊರೆತಿಲ್ಲ . ಆ ಕಾರಣದಿಂದಾಗಿ ದಾವಣಗೆರೆಗೆ ಎರಡನೇ ರಾಜಧಾನಿ ಸ್ಥಾನಮಾನ ನೀಡಬೇಕೆಂದು ಮರುಳಯ್ಯ ಅಭಿಪ್ರಾಯಪಟ್ಟರು.

ಜಿಲ್ಲೆಯಲ್ಲಿ ಸುಮಾರು 20 ಸಾವಿರ ಮಕ್ಕಳು ಶಾಲೆಯಿಂದ ವಂಚಿತರಾಗಿದ್ದು , ಆ ಮಕ್ಕಳಿಗೆ ಅಕ್ಷರ ಜ್ಞಾನ ಒದಗಿಸಲು ಅಧಿಕಾರಿ ವರ್ಗ ಹಾಗೂ ಪೋಷಕರು ಮುತುವರ್ಜಿ ವಹಿಸಬೇಕು. ಸಂಪೂರ್ಣ ಸಾಕ್ಷರತೆಯಿಂದ ಸುಂದರ ನಾಡಿನ ಸೃಷ್ಟಿ ಸಾಧ್ಯವಾಗುತ್ತದೆ ಎಂದು ಮರುಳಯ್ಯ ಹೇಳಿದರು. ವಿಚಾರವಾದಿ ಪ್ರೊ.ಬಿ.ವಿ.ವೀರಭದ್ರಪ್ಪ, ಕಸಾಪ ಜಿಲ್ಲಾಧ್ಯಕ್ಷ ಪ್ರೊ.ಎಸ್‌.ಬಿ.ರಂಗನಾಥ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಚಂದ್ರಶೇಖರ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more