ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಂಪ್ಯೂಟರ್‌ ಸಾಕ್ಷರತೆ ಹೆಚ್ಚಳಕ್ಕೆ ರಾಜ್ಯದಲ್ಲಿ ಹೊಸ ಕಾರ್ಯಕ್ರಮ ‘ಸರಳ್‌’

By Staff
|
Google Oneindia Kannada News

ಬೆಂಗಳೂರು : ಜನ ಸಾಮಾನ್ಯರಿಗೆ ಕಂಪ್ಯೂಟರ್‌ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಎಂಸಿಸಿ ಸಾಫ್ಟ್‌ವೇರ್‌ ಅಭಿವೃದ್ಧಿ ಮತ್ತು ತರಬೇತಿ ನಿಗಮ ‘ಸರಳ್‌’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕಂಪ್ಯೂಟರ್‌ ಬಗ್ಗೆ ಜನ ಸಾಮಾನ್ಯರಿಗೆ ತಿಳಿವಳಿಕೆ ನೀಡುವ ‘ಸರಳ್‌’ ಕಾರ್ಯಕ್ರಮವನ್ನು ಈಗಾಗಲೇ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತಂದಿದ್ದು , ಪ್ರಸ್ತುತ ಕರ್ನಾಟಕದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಕರ್ನಲ್‌ ಜಿ.ವಿಶ್ವನಾಧಮ್‌ ತಿಳಿಸಿದ್ದಾರೆ. ರಾಷ್ಟ್ರೀಯ ಕಂಪ್ಯೂಟರ್‌ ಸಾಕ್ಷರತಾ ಮಿಷನ್‌ ಯೋಜನೆಯಡಿ ಈ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ನಿಮಗ ಹಮ್ಮಿಕೊಂಡಿದೆ.

ಉತ್ತರಾಂಚಲ, ಚತ್ತೀಸ್‌ಗಢ, ಬಿಹಾರ, ರಾಜಸ್ತಾನ, ಜಾರ್ಖಂಡ್‌, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸರಳ್‌ ಕಾರ್ಯಕ್ರಮ ಯಶಸ್ವಿಯಾಗಿದೆ. ಈ ಕಾರ್ಯಕ್ರಮದಡಿ ದೇಶಾದ್ಯಂತ 600 ತರಬೇತಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು , ಸುಮಾರು 2 ಲಕ್ಷ ವಿದ್ಯಾರ್ಥಿಗಳು ತರಬೇತಿ ಹೊಂದಿದ್ದಾರೆ. ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಗುರಿಯನ್ನು ಸಂಸ್ಥೆ ಹೊಂದಿದೆ ಎಂದು ವಿಶ್ವನಾಧಮ್‌ ಹೇಳಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಕರ್ನಾಟಕ ಸಿಲಿಕಾನ್‌ ಕಣಿವೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X