• search

ಬೆಂಗಳೂರಿನಲ್ಲಿ ಮತ್ತೊಂದು ಹಗಲು ದರೋಡೆ, ವೃದ್ಧೆ ಮೇಲೆ ಹಲ್ಲೆ

By Staff
Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಬೆಂಗಳೂರು: ಇತ್ತೀಚೆಗಷ್ಟೇ ಬಸವೇಶ್ವರ ನಗರ ಹಾಗೂ ಕೆ.ಆರ್‌. ಪುರಂನಲ್ಲಿ ಹಗಲಿನಲ್ಲಿ ನಡೆದ ದರೋಡೆ ಪ್ರಕರಣ ಜನರ ಮನಸ್ಸಿನಲ್ಲಿ ಹಸಿಯಾಗಿರುವಾಗಲೇ, ಜಯನಗರದಲ್ಲಿ ಹಾಡು ಹಗಲೇ ವೃದ್ಧೆಯಾಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಘಟನೆ ವರದಿಯಾಗಿದೆ.

    ಶನಿವಾರ, ಜಯನಗರದ ಸಿದ್ಧಲಿಂಗಯ್ಯ ಎಂಬವರ ಮನಗೆ ನುಗ್ಗಿದ ದುಷ್ಕರ್ಮಿಗಳು ಅವರ ಮನಯಲ್ಲಿದ್ದ ಲಲಿತಮ್ಮ (60) ಶ್ವೇತ ಹಾಗೂ ನಳಿನಿ ಎಂಬವರ ಮೇಲೆ ಹಲ್ಲೆ ಮಾಡಿ ಮೂರು ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.

    ಟಾಟಾ ಸುಮೋದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಈ ಕುಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಸದ್ದು ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸುವ ಹೊತ್ತಿಗೆ ಮೂವರು ವ್ಯಕ್ತಿಗಳು ಪರಾರಿಯಾಗಿದ್ದರು. ಆದರೆ ಒಬ್ಬ ವ್ಯಕ್ತಿಯನ್ನು ಹಿಡಿಯುವಲ್ಲಿ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ. ಆತನನ್ನು ಗಂಟಾಗನ ಹಳ್ಳಿಯ ಹರೀಶ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    (ಇನ್ಫೋ ವಾರ್ತೆ)

    ವಾರ್ತಾ ಸಂಚಯ

    ಮುಖಪುಟ / ಇವತ್ತು... ಈ ಹೊತ್ತು...

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more