ರಾಜ್ಯದಲ್ಲಿ ಪೋಟಾ ಕಾಯ್ದೆ ಜಾರಿ ಮಾಡುವುದಿಲ್ಲ -ಎಸ್ಸೆಂ ಕೃಷ್ಣ
ನವದೆಹಲಿ: ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ)ವನ್ನು ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ಅವರು ಪ್ರಬಲವಾಗಿ ವಿರೋಧಿಸಿದ್ದು , ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸುವುದಿಲ್ಲ ಎಂದು ಕೇಂದ್ರ ಸರಕಾರಕ್ಕೆ ಸವಾಲು ಹಾಕಿದ್ದಾರೆ.
ಪೋಟಾ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವುದಿಲ್ಲ. ಈ ಬಗ್ಗೆ ಕರ್ನಾಟಕ ಸರಕಾರದ ವಿರುದ್ಧ ಯಾವುದೇ ಸಾಂವಿಧಾನಿಕ ಕ್ರಮ ಕೈಗೊಂಡರೂ ಪರವಾಗಿಲ್ಲ ಎಂದು ಕೃಷ್ಣ ಹೇಳಿದ್ದಾರೆ. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಜನಾ ಕೃಷ್ಣಮೂರ್ತಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡುತ್ತಿದ್ದರು.
ಪೋಟಾ ಕಾಯ್ದೆ ಸಂಬಂಧಿಸಿದಂತೆ ಜನಾ ಕೃಷ್ಣ ಮೂರ್ತಿಯವರ ಹೇಳಿಕೆಗಳು ಅತಿರೇಕದಿಂದ ಕೂಡಿವೆ. ಪೋಟಾ ಕಾಯ್ದೆಯನ್ನು ಕೇಂದ್ರ ಸರಕಾರ ರೂಪಿಸಿರಬಹುದು. ಆದರೆ ಅದರ ಅಳವಡಿಕೆಯ ಸ್ವಾತಂತ್ರ್ಯವನ್ನು ರಾಜ್ಯಗಳ ವಿವೇಚನೆಗೆ ಬಿಡುವುದು ಸೂಕ್ತ ಎಂದು ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ












Click it and Unblock the Notifications