ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಖಾಸಗಿಯವರ ಕೈಗೆ

By Staff
|
Google Oneindia Kannada News

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳ ನಿರ್ವಹಣೆ ಸರಿಯಾಗಿಲ್ಲ ಎಂಬ ದೂರುಗಳಿಂದ ಪಾರಾಗುವ ಹಿನ್ನೆಲೆಯಲ್ಲಿ ರಾಜ್ಯಸರಕಾರವು ಇವುಗಳ ನಿರ್ವಹಣೆಯನ್ನು ಖಾಸಗಿಯವರಿಗೆ ಒಪ್ಪಿಸಲು ನಿರ್ಧರಿಸಿದೆ.

ಈ ಬಗ್ಗೆ ಕಳೆದ ವಾರದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಆರೋಗ್ಯ ಸಚಿವ ಎ. ಬಿ. ಮಾಲಕ ರೆಡ್ಡಿ ತಿಳಿಸಿದರು. ಈಗಾಗಲೇ ಹಲವು ಸ್ವಯಂ ಸೇವಾ ಸಂಸ್ಥೆಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ವಹಣೆಗೆ ಮುಂದೆ ಬಂದಿವೆ. ಈಗಾಗಲೇ ಆರೋಗ್ಯ ಕೇಂದ್ರಗಳಲ್ಲಿರುವ ಸರಕಾರಿ ಸಿಬ್ಬಂದಿಗಳು ಖಾಸಗಿ ಸಂಸ್ಥೆಗಳಡಿಯಲ್ಲಿ ದುಡಿಯಬಹುದು ಎಂದು ರೆಡ್ಡಿ ಹೇಳಿದರು.

ಅಲ್ಲದೆ 1998ರಿಂದ ಜಿಲ್ಲೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ವಚ್ಛತಾ ಕೆಲಸಕ್ಕೆ ನೌಕರರನ್ನು ನೇಮಿಸಿರಲಿಲ್ಲ. ಈ ವರ್ಷ ಸ್ವಚ್ಛತಾ ಕೆಲಸವನ್ನೂ ಖಾಸಗಿ ವಲಯಕ್ಕೆ ಒಪ್ಪಿಸಲು ಸರಕಾರ ನಿರ್ಧರಿಸಿದೆ ಎಂದ ಸಚಿವರು, ಲೋಕಾಯುಕ್ತರು ಆಸ್ಪತ್ರೆಗಳಲ್ಲಿ ಅನಿರೀಕ್ಷಿತ ತಪಾಸಣೆಗಳನ್ನು ನಡೆಸಿ ಅವ್ಯವಹಾರಗಳನ್ನು ಬಯಲಿಗೆಳೆಯುತ್ತಿರುವುದು ಶ್ಲಾಘನಾರ್ಹ ಎಂದರು.

ಮುಂದಿನ ವರ್ಷದಿಂದ ವೈದ್ಯಕೀಯ ಸೇವೆಯ ಗುಣಮಟ್ಟ ಹೆಚ್ಚಿಸುವ ದೃಷ್ಠಿಯಿಂದ ರಾಜ್ಯದ ಎಲ್ಲಾ ಆಸ್ಪತ್ರೆಗಳ ನಡುವೆ ಅಂತರ್ಜಾಲ ಸಂಪರ್ಕ ಕಲ್ಪಿಸಲಾಗುವುದು ಎಂದು ರೆಡ್ಡಿ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X