ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಇನ್ಫೋಸಿಸ್‌ ಪ್ರತಿಷ್ಠಾನ

By Staff
|
Google Oneindia Kannada News

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ನಾಲ್ಕು ಜಿಲ್ಲೆಗಳಲ್ಲಿ ನೀರಿನ ಅರವಟಿಗೆಗಳನ್ನು ನಿರ್ಮಿಸಲು ಇನ್ಫೋಸಿಸ್‌ ಪ್ರತಿಷ್ಠಾನ ಮುಂದೆ ಬಂದಿದೆ.

ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಸೋಮವಾರ ಈ ವಿಷಯವನ್ನು ಪ್ರಕಟಿಸಿದರು. ಅವರು ನಿರ್ಮಲ ಬೆಂಗಳೂರು ಕಾರ್ಯಕ್ರಮದನ್ವಯ ಇನ್ಫೋಸಿಸ್‌ ನಿರ್ಮಿಸಿದ 24 ಶೌಚಾಲಯವನ್ನು ಸಾರ್ವಜನಿಕರಿಗೆ ಸಮರ್ಪಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಬಳ್ಳಾರಿ, ಗುಲ್ಬರ್ಗಾ, ರಾಯಚೂರು ಮತ್ತು ಧಾರವಾಡ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಬವಣೆ ಹೆಚ್ಚಾಗಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಮಳೆ ನೀರಿನ ಅರವಟಿಗೆಗಳನ್ನು ಸ್ಥಾಪಿಸಲು ಅವಕಾಶ ನೀಡುವಂತೆ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ಕೇಳಿಕೊಂಡಿದ್ದಾರೆ. ಆದರೆ, ಅರವಟಿಗೆಗಳ ಅವಶ್ಯಕತೆ ಎಲ್ಲೆಲ್ಲಿದೆ ಎಂಬುದನ್ನು ಆಯಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಶೀಲನೆ ನಡೆಸಿದ ನಂತರ ತಿಳಿಸಲಾಗುವುದು ಎಂದು ಕೃಷ್ಣ ಹೇಳಿದರು.

ಈ ಸಂದರ್ಭದಲ್ಲಿ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಸುಧಾ ಮೂರ್ತಿ ಅವರನ್ನು ಮುಖ್ಯಮಂತ್ರಿ ಕೃಷ್ಣ ಸನ್ಮಾನಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಕರ್ನಾಟಕ ಸಿಲಿಕಾನ್‌ ಕಣಿವೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X