ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌ ಜಿಲ್ಲಾ ಪಂಚಾಯತ್‌ ಅಧ್ಯಕ್ಷರಾಗಿ ಅನುರಾಧಾ ಬಸವರಾಜ್‌

By Staff
|
Google Oneindia Kannada News

ಬೀದರ್‌: ಶುಕ್ರವಾರ ನಡೆದ ಬೀದರ್‌ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅನುರಾಧಾ ಬಸವರಾಜ್‌ ಟಪಾಲಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯತ್‌ನ ಉಪಾಧ್ಯಕ್ಷರಾಗಿ ಕಮಲಬಾಯಿ ಶಿವರಾಜಿ ರಾವ್‌ ಅವರನ್ನು ಆಯ್ಕೆಮಾಡಲಾಗಿದೆ. ಬಸವ ಕಲ್ಯಾಣ ತಾಲ್ಲೂಕಿನ ರಾಜೇಶ್ವರ ಕ್ಷೇತ್ರದಿಂದ ಅನುರಾಧಾ ಅವರು ಜಿಲ್ಲಾ ಪಂಚಾಯತ್‌ಗೆ ಆಯ್ಕೆಯಾಗಿದ್ದಾರೆ. ್ಫಜಿಲ್ಲಾ ಪಂಚಾಯತ್‌ ಅಧ್ಯಕ್ಷ ಸ್ಥಾನದ ಚುನಾವಣೆಗೆ ಛಾಯಾ ಬಾಯಿ ಮತ್ತು ಅನುರಾಧಾ ಅವರ ನಡುವೆ ತೀವ್ರ ಸ್ಪರ್ಧೆಯಿದ್ದರೂ, ಕೊನೇ ಕ್ಷಣದಲ್ಲಿ ಛಾಯಾ ಬಾಯಿ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದರಿಂದ ಅನುರಾಧಾ ಅವರು ಅವಿರೋಧವಾಗಿ ಆಯ್ಕೆಯಾಗುವುದು ಸುಲಭವಾಯಿತು.

ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮ ಪತ್ರ ಸಲ್ಲಿಸದೇ ಇದ್ದುದರಿಂದ ಹಮ್ನಾಬಾದ್‌ ತಾಲ್ಲೂಕಿನ ದುಬಲ ಗುಂಡಿಯಿಂದ ಸ್ಪರ್ಧಿಸಿದ್ದ ಕಮಲಾ ಬಾಯಿ ಅವರು ಅವಿರೋಧವಾಗಿ ಆಯ್ಕೆಯಾದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X