ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಕಲಿಕೆ ಕಡ್ಡಾಯ

By Staff
|
Google Oneindia Kannada News

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲದ ಪ್ರಥಮ ಸೆಮಿಸ್ಟರ್‌ನ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಕನ್ನಡ ಪ್ರಶ್ನೆ ಪತ್ರಿಕೆಯನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರು ಎಲ್ಲ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬೇಕು ಎಂದು ಸರಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಮೊದಲ ವರ್ಷದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ 100 ಅಂಕದ ಕನ್ನಡ ಪ್ರಶ್ನೆ ಪತ್ರಿಕೆಯನ್ನು ಜಾರಿಗೊಳಿಸಲು ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ಹಾಗೂ ಶೈಕ್ಷಣಿಕ ಸೆನೆಟ್‌ ಮಂಡಳಿಗಳು ಈಗಾಗಲೇ ನಿರ್ಧರಿಸಿವೆ. ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಸಂಸ್ಕೃತಿ ಹಾಗೂ ಕನ್ನಡ ಪರಂಪರೆಯನ್ನೊಳಗೊಂಡ ಪಠ್ಯಕ್ರಮ ಹಾಗೂ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಬಗ್ಗೆ ಸಾಮಾನ್ಯ ಜ್ಞಾನ ಮೂಡಿಸುವ ಪ್ರಾಯೋಗಿಕ ಕನ್ನಡ ಪಠ್ಯಕ್ರಮವನ್ನು ಈ ಬಾರಿ ಜಾರಿಗೆ ತರಲಾಗುವುದು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X