ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರು ನಗರಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ

By Staff
|
Google Oneindia Kannada News

ಬೆಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರೀ ಮೇಲುಗೈ ಸಾಧಿಸುವುದರೊಂದಿಗೆ ಕರಾವಳಿಯಲ್ಲಿನ ಭಾರತೀಯ ಜನತಾ ಪಕ್ಷದ ಪ್ರಾಬಲ್ಯಕ್ಕೆ ಕಾಂಗ್ರೆಸ್‌ ಮತ್ತೆ ಪೆಟ್ಟುಕೊಟ್ಟಿದೆ.

ಗುರುವಾರ ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು , 33 ವಾರ್ಡ್‌ಗಳ ಫಲಿತಾಂಶ ಹೊರಬಿದ್ದಿದ್ದು , ಕಾಂಗ್ರೆಸ್‌ 21 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 10 ಹಾಗೂ ಕಾಂಗ್ರೆಸ್‌ 2 ಸ್ಥಾನಗಳನ್ನು ತಮ್ಮದಾಗಿಸಿಕೊಂಡಿವೆ.

ಶನಿವಾರ ಮಧ್ಯಾಹ್ನದ ವೇಳೆಗೆ ಪಾಲಿಕೆಯ ಎಲ್ಲ ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಲಿದ್ದು , ಕಾಂಗ್ರೆಸ್‌ ಅಧಿಕಾರದ ಸೂತ್ರ ಹಿಡಿಯುವುದು ಈಗಾಗಲೇ ಖಚಿತವಾಗಿದೆ. ಕಾಂಗ್ರೆಸ್‌ ಪಾಳಯದಲ್ಲಿ ಈಗಾಗಲೇ ವಿಜಯೋತ್ಸವದ ಉತ್ಸಾಹ ಕಾಣಿಸಿಕೊಂಡಿದ್ದು, ಕುರ್ಚಿ ರಾಜಕಾರಣ ಪ್ರಾರಂಭವಾಗಿದೆ.
(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X