ಲೇಖ-ಕ ಅಗ್ರಹಾರ ಕೃಷ್ಣಮೂರ್ತಿ ಮನೆ ಮೇಲೆ ಸಿಬಿಐ ದಾಳಿ
ಬೆಂಗಳೂರು : ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಾದೇಶಿಕ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ಅವರ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ಕೃಷ್ಣಮೂರ್ತಿಯವರ ಮನೆಯ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸಾಗಿದ್ದಾರೆ. ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ಮನೆಯನ್ನು ತಪಾಸಣೆ ಮಾಡಿದ ಸಿಬಿಐ ಅಧಿಕಾರಿಗಳಿಗೆ ಎದುರಾದದ್ದು ಕೃಷ್ಣಮೂರ್ತಿ ಅವರ ಅಪಾರ ಸಂಖ್ಯೆಯ ಪುಸ್ತಕಗಳ ಸಂಗ್ರಹ.
ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಈ ದಾಳಿ ನಡೆಸಿದ್ದರು. ದಾಳಿ ಸಂದರ್ಭದಲ್ಲಿ ಕೃಷ್ಣಮೂರ್ತಿ ಅವರು ತಮ್ಮ ಆದಾಯಕ್ಕಿಂತ ಹೆಚ್ಚು ಆಸ್ತಿ ಪಾಸ್ತಿ ಹೊಂದಿರುವುದರ ಬಗ್ಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ ಎಂದು ಸಿಬಿಐ ಅಧಿಕಾರಿಗಳು ಲಿಖಿತ ಪತ್ರವೊಂದನ್ನು ಕೃಷ್ಣಮೂರ್ತಿಯವರಿಗೆ ನೀಡಿದ್ದಾರೆ. ದಾಳಿ ನಡೆಸಿದ ನಂತರ ಕೃಷ್ಣಮೂರ್ತಿಯವರ ಎರಡು ಭಾವಚಿತ್ರಗಳೊಂದಿಗೆ ಸಿಬಿಐ ಅಧಿಕಾರಿಗಳು ವಾಪಾಸ್ಸಾಗಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...