ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರಿನಲ್ಲಿ ಜುಲೈ 1 ರಿಂದ ಪ್ರತ್ಯೇಕ ವಿಶೇಷ ನ್ಯಾಯಾಲಯ

By Staff
|
Google Oneindia Kannada News

ಬೆಂಗಳೂರು :ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ನಡೆವ ದೌರ್ಜನ್ಯ ಪ್ರಕರಣಗಳ ವಿಚಾರಣೆಗಾಗಿ ಪ್ರತ್ಯೇಕ ವಿಶೇಷ ನ್ಯಾಯಾಲಯವೊಂದನ್ನು ತುಮಕೂರಿನಲ್ಲಿ ಆರಂಭಿಸಲು ಸರಕಾರ ನಿರ್ಧರಿಸಿದೆ.

ಈ ವಿಷಯವನ್ನು ಬುಧವಾರ ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ತುಮಕೂರು ಜಿಲ್ಲೆಯಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿರುವುದರಿಂದ ಅಲ್ಲಿ ವಿಶೇಷ ನ್ಯಾಯಾಲಯದ ಅಗತ್ಯವಿದೆ ಎಂದ ಸಚಿವರು, ರಾಜ್ಯ ಸರಕಾರದ ಮನವಿಗೆ ಹೈಕೋರ್ಟ್‌ ಈಗಾಗಲೇ ಸಮ್ಮತಿಸಿದ್ದು ಈಗಾಗಲೇ ವಿಶೇಷ ನ್ಯಾಯಾಲಯಕ್ಕಾಗಿ ಪ್ರತ್ಯೇಕ ನ್ಯಾಯಾಧೀಶರ ನೇಮಕ ಪ್ರಕ್ರಿಯೆಯೂ ಮುಗಿದಿದೆ ಎಂದರು.

ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ಎಲ್ಲಾ ಜಿಲ್ಲೆಗಳಲ್ಲಿ ಇಂತಿಷ್ಟು ಅವಧಿಯನ್ನು ನ್ಯಾಯಾಲಯಗಳು ನಿಗದಿಪಡಿಸಬೇಕು ಎಂದು ತಾವು ಹೈಕೋರ್ಟಿನ ಮುಖ್ಯ ನ್ಯಾಯ ಮೂರ್ತಿಗಳ ಬಳಿ ಮನವಿ ಮಾಡಿಕೊಂಡಿರುವುದಾಗಿ ಸಚಿವರು ಹೇಳಿದರು. ಬಿಜಾಪುರ, ಕೋಲಾರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ವಿಶೇಷ ಕೋರ್ಟು ಸ್ಥಾಪಿಸುವುದಾಗಿ ಸಚಿವರು ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X