ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ: 15 ದಿನಗಳಲ್ಲಿ 2ಅಮಾವಾಸ್ಯೆ

By Staff
|
Google Oneindia Kannada News

ನವದೆಹಲಿ : ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯಿಂದ ಉಂಟಾಗುತ್ತಿದ್ದ ನಷ್ಟವನ್ನು ಸರಿಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ಸ್ವಾಮ್ಯದ ಮೂರು ತೈಲ ಸಂಸ್ಥೆಗಳು ಶನಿವಾರ ಮಧ್ಯರಾತ್ರಿಯಿಂದಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಹೆಚ್ಚಿಸಿವೆ.

ಹದಿನೈದು ದಿನಗಳ ಅಂತರದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಹೆಚ್ಚಾಗುತ್ತಿರುವುದು ಇದು ಎರಡನೇ ಬಾರಿ. ಈ ಬಾರಿ ಪೆಟ್ರೋಲ್‌- ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 23 ರಿಂದ 30 ಪೈಸೆಗಳಷ್ಟು ದುಬಾರಿಯಾಗಿದೆ.

ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌, ಭಾರತ್‌ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್‌ ಪೆಟ್ರೋಲಿಯಂ ಸಂಸ್ಥೆಗಳು ಮುಂಬಯಿಯಲ್ಲಿ ಶನಿವಾರ ಸಭೆ ಸೇರಿ ಚರ್ಚಿಸಿ, ತೈಲ ಬೆಲೆ ಹೆಚ್ಚಿಸಲು ನಿರ್ಧರಿಸಿದವು. ಬೆಲೆ ಹೆಚ್ಚಳದಿಂದ ಬೆಂಗಳೂರಿನಲ್ಲಿ ಪೆಟ್ರೋಲ್‌ ಬೆಲೆ 32.83 ರುಪಾಯಿಯಿಂದ 33.09 ರುಪಾಯಿಗೆ ಹಾಗೂ ಡೀಸೆಲ್‌ ಬೆಲೆ 20.42 ರು.ನಿಂದ 20.67 ರು.ಗೆ ಹೆಚ್ಚಾಗಿದೆ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X