ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಗಿಲು ಹಳ್ಳಿಯಲ್ಲಿ ಜೆಲೆಟಿನ್‌ ಕಡ್ಡಿಗಳು ಸ್ಫೋಟಿಸಿ 40 ಮಂದಿಗೆ ಗಾಯ

By Staff
|
Google Oneindia Kannada News

ಬೆಂಗಳೂರು: ನಗರದ ಹೊರವಲಯದಲ್ಲಿರುವ ಕೋಗಿಲು ಹಳ್ಳಿಯಲ್ಲಿ ಕಲ್ಲಿನ ಕೋರೆಯಲ್ಲಿ ಕಲ್ಲುಗುಂಡು ಒಡೆಯಲಿಟ್ಟಿದ್ದ ಸ್ಫೋಟಕ ಸಿಡಿದು 40 ಮಂದಿ ಗಾಯಗೊಂಡಿದ್ದಾರೆ.

ಕ್ವಾರಿಯಲ್ಲಿ ಕೆಲಸ ನಡೆಯುತ್ತಿದ್ದಾಗ ಜೆಲೆಟಿನ್‌ ಕಡ್ಡಿಗಳಿಂದಾಗಿ ಬಂಡೆಕಲ್ಲು ಸ್ಫೋಟಗೊಂಡು ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದವರು ಗಾಯಗೊಂಡಿದ್ದಾರೆ. ಅಲ್ಲದೆ ಕೆಲಸ ಮಾಡುತ್ತಿದ್ದ ಸ್ಥಳದ ಹತ್ತಿರವಿದ್ದ ಸುಮಾರು 30 ಮನೆಗಳು ಹಾನಿಗೊಳಗಾಗಿವೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರನ್ನು ಹತ್ತಿರ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಫೋಟಗೊಂಡ ಜಾಗದಲ್ಲಿ ಇನ್ಯಾರಿಗಾದರೂ ಗಾಯಗಳಾಗಿವೆಯೇ ಎಂಬ ಬಗ್ಗೆ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X