ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುದ್ರಣ ಮಾಧ್ಯಮದೊಳಗೆ ತೂರಿ ಬರಲಿದೆ ವಿದೇಶೀ ಬಂಡವಾಳ !

By Staff
|
Google Oneindia Kannada News

ನವದೆಹಲಿ : ದೇಶೀಯ ಮಾಧ್ಯಮ ಸಂಘಟನೆಗಳು ಮತ್ತು ಪ್ರತಿ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರಕಾರವು ಸುದ್ದಿ ಪತ್ರಿಕೆಗಳಲ್ಲಿ ಶೇ 26ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡಿದೆ.

ಮಂಗಳವಾರ ಪ್ರಧಾನಿ ವಾಜಪೇಯಿ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆ-ಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್‌ ತಿಳಿಸಿದ್ದಾರೆ. ಆದರೆ ಸಂಪಾದಕೀಯ ಮತ್ತು ಆಡಳಿತ ನಿಯಂತ್ರಣ ಭಾರತೀಯ ಕೈಗಳಲ್ಲೇ ಇರುವಂತೆ ಸುರಕ್ಷಾ ಕ್ರಮವನ್ನು ಕೈಗೊಳ್ಳಲಾಗಿದೆ. ಮುದ್ರಣ ಮಾಧ್ಯಮದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡುವ ಮುನ್ನ ಹೂಡಿಕೆದಾರರ ಪೂರ್ವಾಪರಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು. ಶೇರು ಪ್ರಮಾಣದಲ್ಲಿ ಯಾವುದೇ ಬದಲಾವಣೆ ಮಾಡುವ ಮುನ್ನ ವಾರ್ತಾ ಇಲಾಖೆಯ ಪೂರ್ವಾನುಮತಿ ಪಡೆಯಬೇಕು ಎಂದು ಸುಷ್ಮಾ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X