ರಾಜ್ಯದ ತಾಂತ್ರಿಕ ಕಾಲೇಜುಗಳಲ್ಲಿ 1000 ಜೈವಿಕ ತಂತ್ರಜ್ಞಾನ ಸೀಟು
ಬೆಂಗಳೂರು : ಅಖಿಲ ಭಾರತ ತಾಂತ್ರಿಕ ಮಂಡಳಿ ರಾಜ್ಯದ 20 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೈವಿಕ ತಂತ್ರಜ್ಞಾನ ಕೋರ್ಸ್ ಆರಂಭಿಸಲು ಅನುಮತಿ ನೀಡಿದೆ ಎಂದು ಗುರುವಾರವಷ್ಟೇ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದ ಉನ್ನತ ಶಿಕ್ಷಣ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಒಟ್ಟು 1000 ಜೈವಿಕ ತಂತ್ರಜ್ಞಾನ ಸೀಟುಗಳಿಗೆ ತಾಂತ್ರಿಕ ಮಂಡಳಿ ಅನುಮೋದನೆ ನೀಡಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ಜೈವಿಕ ತಂತ್ರಜ್ಞಾನ ಕೋರ್ಸ್ ಆರಂಭವಾಗಲಿದ್ದು , ಪ್ರತಿ ಕಾಲೇಜಿಗೆ 40 ರಿಂದ 60 ಸೀಟು ಒದಗಿಸಲಾಗಿದೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ತಿಳಿಸಿದರು.
ರಾಜ್ಯದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಕಾರ್ಡ್ ಪದ್ಧತಿ ಜಾರಿಗೊಳಿಸಲಾಗುತ್ತಿದೆ. ಪ್ರತಿ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿ ಪಡೆದ ಅಂಕ, ಆತನ ಹಾಜರಾತಿ ಇತ್ಯಾದಿ ಒಳಗೊಂಡಿರುವ ಸ್ಮಾರ್ಟ್‌ಕಾರ್ಡ್ ವಿದ್ಯಾರ್ಥಿಯ ಜಾತಕದಂತಿರುತ್ತದೆ ಎಂದು ಪರಮೇಶ್ವರ್ ಹೇಳಿದರು. ಬರುವ ಶೈಕ್ಷಣಿಕ ವರ್ಷದಲ್ಲಿ ಎರಡು ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ ಎಂದೂ ಅವರು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications