ತಮಿಳುನಾಡಿಗೆ ನೀರು : ನಿರ್ಧರಿಸಲು ಶನಿವಾರ ರಾಜ್ಯ ಸಂಪುಟ ಸಭೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಪ್ರಧಾನಿ ಎ.ಬಿ.ವಾಜಪೇಯಿ ಅವರು ಮಾಡಿರುವ ಮನವಿ ಕುರಿತು ಶನಿವಾರ ಸಚಿವ ಸಂಪುಟ ಒಮ್ಮತದ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ.

ಶುಕ್ರವಾರ ಸುದ್ದಿಗಾರರೊಡನೆ ಮಾತಾಡುತ್ತಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಡಿ.ಬಿ.ಚಂದ್ರೇಗೌಡ ಈ ವಿಷಯ ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ಕೆಆರೆಸ್‌, ಹಾರಂಗಿ, ಹೇಮಾವತಿ ಮತ್ತು ಕಬಿನಿ ಜಲಾಶಯಗಳಲ್ಲಿ ನೀರು ತೀರಾ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದಷ್ಟೇ ಮಳೆಯಾಗುತ್ತಿದೆ. ಸದ್ಯಕ್ಕೆ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿಯಲ್ಲಿ ರಾಜ್ಯ ಖಂಡಿತ ಇಲ್ಲ. ಕಾವೇರಿ ನದಿ ಪರಿಶೀಲನಾ ಸಮಿತಿ ಬೇಕಾದರೆ ಅಣೆಕಟ್ಟುಗಳ ನೀರಿನ ಮಟ್ಟವನ್ನು ಬಂದು ನೋಡಲಿ ಎಂದು ಚಂದ್ರೇಗೌಡ ಹೇಳಿದರು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+