• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಡಲ ನಗರಿಯಲ್ಲಿ ಡಿ.21ರಿಂದ ವಿಶ್ವ ಬಂಟರ ಸಮ್ಮೇಳನ-2002

By Staff
|

ಮಂಗಳೂರು: ಡಿಸೆಂಬರ್‌ 21 ರಿಂದ ಎರಡು ದಿನಗಳ ಕಾಲ ಕಡಲ ನಗರಿಯಲ್ಲಿ ಜಾಗತಿಕ ಬಂಟರ ಸಮ್ಮೇಳನ-2002 ನಡೆಯಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘ ಈ ಬೃಹತ್‌ ಸಮಾವೇಶವನ್ನು ಏರ್ಪಡಿಸಿದೆ.

ವಿಶ್ವದ ವಿವಿಧೆಡೆಗಳಲ್ಲಿ ನೆಲೆಸಿರುವ ಬಂಟರನ್ನು ವೇದಿಕೆಯಾಂದರಲ್ಲಿ ಕಲೆ ಹಾಕುವುದು ಹಾಗೂ ಬಂಟರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಹುಡುಕುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಬಂಟರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಸಮ್ಮೇಳನದ ಅಂಗವಾಗಿ ‘ಸಿರಿ ಕದಿಕೆ’ ಎನ್ನುವ ಸ್ಮರಣ ಸಂಚಿಕೆ ಹೊರ ತರಲಾಗುತ್ತಿದ್ದು , ಸ್ಮರಣ ಸಂಚಿಕೆಯಲ್ಲಿ ವಿದ್ಯಾರ್ಥಿಗಳನ್ನೂ ತೊಡಗಿಸಿಕೊಳ್ಳಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಿದ್ದು , ಉತ್ತಮ ಪ್ರಬಂಧಗಳನ್ನು ಸಿರಿ ಕದಿಕೆಯಲ್ಲಿ ಪ್ರಕಟಿಸಲಾಗುವುದು.

ಕನ್ನಡ, ತುಳು ಅಥವಾ ಇಂಗ್ಲಿಷ್‌ನಲ್ಲಿ ಬಂಟ ಸಮುದಾಯದ ಶಾಲೆ- ಕಾಲೇಜುಗಳ ವಿದ್ಯಾರ್ಥಿಗಳು ‘ಬಂಟರು ಹೇಗಿದ್ದರು? ಹೇಗಾದರು?’ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ 500 ಪದಗಳನ್ನು ಮೀರದಂತೆ ಪ್ರಬಂಧ ಬರೆಯಬಹುದು. ಸಮ್ಮೇಳನದ ವೇದಿಕೆಯಲ್ಲಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುವುದು. ಪ್ರಬಂಧ ತಲುಪಲು ಕೊನೆಯ ದಿನ ಜುಲೈ 31. ವಿಳಾಸ : ಅಧ್ಯಕ್ಷರು, ವಿಶ್ವ ಬಂಟರ ಸಮ್ಮೇಳನ-2002, ಬಂಟ್ಸ್‌ ಹಾಸ್ಟೆಲ್‌, ಮಂಗಳೂರು- 575003.
(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more