• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯಕ್ಕೆ ಸರ್ದಾರ್‌ ಪಟೇಲ್‌ ಪ್ರಶಸ್ತಿ

By Staff
|

ಬೆಂಗಳೂರು: ಕೃಷಿ ಶಿಕ್ಷಣ ಮತ್ತು ಸಂಶೋಧನಾ ವಿಸ್ತರಣೆಯ ಸಂಬಂಧ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ರಾಷ್ಟ್ರದ ಅತ್ಯುತ್ತಮ ಸಂಸ್ಥೆ ಎಂಬ ಅಗ್ಗಳಿಕೆಗೆ ಪಾತ್ರವಾಗಿದೆ.

ಈ ವಿಷಯವನ್ನು ವಿವಿಯ ಕುಲಪತಿ ಡಾ. ಎ. ಎಂ. ಕೃಷ್ಣಪ್ಪ ಬುಧವಾರ ಸಮಾರಂಭವೊಂದರಲ್ಲಿ ತಿಳಿಸಿದ್ದಾರೆ. ಸಂಸ್ಥೆಗೆ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ ನೀಡುವ ಸರ್ದಾರ್‌ ಪಟೇಲ್‌ ಅತ್ಯುತ್ತಮ ಸಂಸ್ಥೆ ಎಂಬ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಜುಲೈ 16ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ದೇಶಾದ್ಯಂತ ಇರುವ ಒಟ್ಟು 37 ಕೃಷಿ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಮತ್ತು ಸಮಗ್ರ ಕಾರ್ಯವ್ಯಾಪ್ತಿಯನ್ನು ಪರಿಶೀಲಿಸಿದ ನಂತರ ಈ ಎಲ್ಲ ರಂಗಗಳಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮಹತ್ವದ ಪ್ರಗತಿ ಸಾಧಿಸಿರುವುದಾಗಿ ಆಯ್ಕೆ ಸಮಿತಿ ಶ್ಲಾಘಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X