ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದ್ಯದಲ್ಲೇ ರಾಜ್ಯದಲ್ಲಿ 19 ಹೊಸ ಭೂಕಂಪ ಮಾಪಕ ಕೇಂದ್ರಗಳು

By Staff
|
Google Oneindia Kannada News

ಬೆಂಗಳೂರು: ಇತ್ತೀಚೆಗೆ ದಕ್ಷಿಣ ಭಾರತದಲ್ಲಿಯೂ ಭೂಮಿ ಕಂಪಿಸುವ ಘಟನೆಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 19 ಭೂಕಂಪ ಮಾಪಕ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವೆ ನಫೀಸ ಫಜಲ್‌ ಮಂಗಳವಾರ ಈ ವಿಷಯ ತಿಳಿಸಿದರು. ಅವರು ಭೂಕಂಪ ತಡೆ ರಚನೆಗಳ ವಿನ್ಯಾಸ ಮತ್ತು ನಿರ್ಮಾಣ ಕುರಿತ ರಾಷ್ಟ್ರಮಟ್ಟದ ತರಗತಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕೇಂದ್ರ ಸರಕಾರ ನೇಮಿಸಿದ್ದ ತಜ್ಞರ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯದಲ್ಲಿ ಈಗಿರುವ 4 ಭೂಕಂಪ ಮಾಪಕ ಕೇಂದ್ರಗಳ ಜೊತೆಗೆ ಇನ್ನೂ 19 ಭೂಕಂಪ ಮಾಪಕ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಸಚಿವೆ ಭರವಸೆ ನೀಡಿದರು.

ಭೂಕಂಪ ತಪ್ಪಿಸಲಾಗದ ನೈಸರ್ಗಿಕ ವಿಕೋಪ. ಆದರೆ ಹಾನಿ ಪ್ರಮಾಣವನ್ನು ಕಡಿಮೆ ಮಾಡಲು ಪ್ರಯತ್ನಿಸಬಹುದು. ಮುಂಜಾಗ್ರತಾ ಕ್ರಮವಾಗಿ ಕಟ್ಟಡ ನಿರ್ಮಾಣ ಸಂಬಂಧ ಸೂಕ್ತ ಯೋಜನೆ ಮತ್ತು ವಿನ್ಯಾಸ, ತಂತ್ರಜ್ಞಾನಗಳನ್ನು ಬಳಸಬೇಕಾಗಿದೆ. ಭೂಕಂಪ ಮಾಪಕ ಕೇಂದ್ರಗಳ ಸ್ಥಾಪನೆಯ ಯೋಜನೆ ಸಿದ್ಧವಾಗಿದ್ದು ಕೇಂದ್ರ ಸರಕಾರದ ಆರ್ಥಿಕ ನೆರವಿಗಾಗಿ ಕಾಯಲಾಗುತ್ತಿದೆ ಎಂದು ನಫೀಸ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X