• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗ್ರಾಮೀಣ ಕರ್ನಾಟಕದತ್ತ ದಾಖಲೆಲಾಭದ ಖುಷಿಯ ಕೆಎಸ್ಸಾರ್ಟಿಸಿ!

By Staff
|

ಬೆಂಗಳೂರು : ಸಾರಿಗೆ ಸಂಪರ್ಕದಿಂದ ವಂಚಿತವಾಗಿರುವ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮಿನಿ ಬಸ್ಸುಗಳನ್ನು ಓಡಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್ಸಾರ್ಟಿಸಿ)ನಿಗಮ ಉದ್ದೇಶಿಸಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳಲ್ಲಿ 32.25 ಕೋಟಿ ರುಪಾಯಿ ದಾಖಲೆ ಲಾಭವನ್ನು ಗಳಿಸಿರುವ ಕೆಎಸ್ಸಾರ್ಟಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಮಿನಿ ಬಸ್ಸುಗಳನ್ನು ಓಡಿಸುವ ಕುರಿತು ಚಿಂತಿಸುತ್ತಿದೆ ಎಂದು ಕೆಎಸ್ಸಾರ್ಟಿಸಿ ಕಾರ್ಯಕಾರಿ ನಿರ್ದೇಶಕ ಕೆ.ಜೈರಾಜ್‌ ತಿಳಿಸಿದ್ದಾರೆ.

ಹಳ್ಳಿಗಳಿಂದ ತಾಲ್ಲೂಕುಗಳಿಗೆ, ತಾಲ್ಲೂಕಿನಿಂದ ತಾಲ್ಲೂಕಿಗೆ ಹಾಗೂ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಸಕ್ತ ವರ್ಷಾಂತ್ಯದೊಳಗೆ ಮಿನಿ ಬಸ್ಸುಗಳನ್ನು ಕೆಎಸ್ಸಾರ್ಟಿಸಿ ರಸ್ತೆಗೆ ಬಿಡಲಿದೆ. ಇದರಿಂದಾಗಿ ಮ್ಯಾಕ್ಸಿ ಕ್ಯಾಬ್‌ ಹಾಗೂ ಖಾಸಗಿ ವಾಹನಗಳಿಗೂ ಸೂಕ್ತ ಪೈಪೋಟಿ ನೀಡಿದಂತಾಗುತ್ತದೆ ಎಂದು ಜೈರಾಜ್‌ ಹೇಳಿದರು.

ಮೊದಲ ಹಂತದಲ್ಲಿ 200 ಮಿನಿ ಬಸ್ಸುಗಳನ್ನು ಓಡಿಸಲಾಗುವುದು. 40 ಆಸನ ಸಾಮರ್ಥ್ಯದ ಈ ಬಸ್ಸುಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲಾಗುವುದು. ಖಾಸಗಿ ಸಹಭಾಗಿತ್ವದಲ್ಲೂ ಬಸ್ಸುಗಳನ್ನು ಓಡಿಸುವ ಕುರಿತು ಪರಿಶೀಲಿಸಲಾಗುತ್ತಿದೆ.

ಪ್ರಯಾಣಕ್ಕೆ ಮುಂಚೆಯೇ ಬಸ್‌ ನಿಲ್ದಾಣದಲ್ಲಿ ಎಲ್ಲಾ ಟಿಕೆಟ್‌ಗಳನ್ನು ವಿತರಿಸುವ ಹಾಗೂ ಕಾಯ್ದಿರಿಸುವ ವ್ಯವಸ್ಥೆಯನ್ನು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಜಾರಿಗೊಳಿಸಲು ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಕೆಎಸ್ಸಾರ್ಟಿಸಿ ಸೇವೆಯನ್ನು ಇನ್ನಷ್ಟು ಉತ್ತಮಗೊಳಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜೈರಾಜ್‌ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more