• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಯೋಕಾನ್‌ ಅಧ್ಯಕ್ಷೆ ಕಿರಣ್‌ ಮುಜುಂದಾರ್‌ಗೆ ಸರ್‌ಎಂವಿ ಪ್ರಶಸ್ತಿ

By Staff
|

Kiran Muzumdar, Biocon Presidentಬೆಂಗಳೂರು : ಬಯೋಟೆಕ್ನಾಲಜಿ ವಲಯದಲ್ಲಿ ಗುರುತಿಸಿಕೊಂಡಿರುವ, ಬಯೋಕಾನ್‌ ಇಂಡಿಯಾ ಗುಂಪಿನ ಅಧ್ಯಕ್ಷೆ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಕಿರಣ್‌ ಮುಜುಂದಾರ್‌ ಈ ವರ್ಷದ ಸರ್‌. ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಹತ್ವದ ಸಾಧನೆಗಾಗಿ ಉದ್ಯಮಿಗಳಿಗೆ ನೀಡುವ ಈ ಪ್ರಶಸ್ತಿಯನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಮಂಡಳಿ (ಎಫ್‌ ಕೆ ಸಿಸಿಐ ) 1999ರಲ್ಲಿ ಸ್ಥಾಪಿಸಿದೆ. ದೇಶದ ಆರ್ಥಿಕ ವ್ಯವಸ್ಥೆಗೆ ಮಹತ್ವದ ಕೊಡುಗೆ ನೀಡಿದ ಉದ್ಯಮಿಗಳಿಗೆ ಈ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ.

ಔದ್ಯಮಿಕ ರಂಗದಲ್ಲಿ ಕಿರಣ್‌ ಮುಂಜುಂದಾರ್‌ ಮಾಡಿರುವ ಸಾಧನೆಯನ್ನು ಪರಿಗಣಿಸಿ ಅವರನ್ನು 2002ನೇ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್‌ 15ರಂದು ನಡೆಯುವ ಸರ್‌. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಸಮಾರಂಭಲ್ಲಿ ಕಿರಣ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಫ್‌ಕೆ ಸಿಸಿಐ ಕಾರ್ಯದರ್ಶಿ ಸಿ. ಮನೋಹರ ತಿಳಿಸಿದ್ದಾರೆ.

ಈ ಹಿಂದೆ ಪ್ರಸಿದ್ಧ ಉದ್ಯಮಿಗಳಾದ ಎನ್‌. ಆರ್‌. ನಾರಾಯಣ ಮೂರ್ತಿ(1999), ಅಜೀಂ ಪ್ರೇಮ್‌ಜಿ(2000) ಮತ್ತು ವಿಜಯ್‌ ಮಲ್ಯ(2001) ಈ ಪ್ರಶಸ್ತಿಗೆ ಪಾತ್ರರಾಗಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more