ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ ವರ್ಷದಿಂದ ಸೆಮಿಸ್ಟರ್‌ ಪದ್ಧತಿಯಲ್ಲಿಸ್ನಾತಕೋತ್ತರ ಪದವಿ

By Staff
|
Google Oneindia Kannada News

ಬೆಂಗಳೂರು : ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಸೆಮಿಸ್ಟರ್‌ ಪದ್ಧತಿಯನ್ನು ಕಡ್ಡಾಯಗೊಳಿಸಲಾಗುವುದು.

ಸೋಮವಾರ ನಡೆದ ಅಂತರವಿಶ್ವವಿದ್ಯಾಲಯ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಕೆಲವು ವಿವಿಗಳಲ್ಲಿ ಸೆಮಿಸ್ಟರ್‌ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಇದೇ ಪದ್ಧತಿಯನ್ನು ಎಲ್ಲ ವಿವಿಗಳಿಗೂ ಅಳವಡಿಸಲಾಗುವುದು ಎಂದು ಪರಮೇಶ್ವರ್‌ ಹೇಳಿದರು.

ಮಂಡಳಿಯ ಸಭೆಯಲ್ಲಿ ಮುಂದಿನ ವರ್ಷದಿಂದ ಬಿಎ, ಬಿಎಸ್ಸಿ, ಬಿಕಾಂ ಸೇರಿದಂತೆ ಎಲ್ಲ ಪದವಿ ತರಗತಿಗಳಿಗೆ ಸಂವಿಧಾನ ಪಠ್ಯವನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಗೆ ಅನುಮತಿ ದೊರೆತಿದೆ. ಅಲ್ಲದೆ ಎಲ್ಲ ಕಾಲೇಜುಗಳಲ್ಲಿ ಲೆಕ್ಕ ಪರಿಶೋಧನೆಯನ್ನೂ ಕಡ್ಡಾಯಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X