• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ದೇಗುಲಗಳಲ್ಲಿ ಕಟ್ಟೆಚ್ಚರ, ಬಿಗಿ ಪೊಲೀಸ್‌ ಪಹರೆ

By Staff
|

ಬೆಂಗಳೂರು : ಗುಜರಾತ್‌ನ ಗಾಂಧಿನಗರದ ಸ್ವಾಮಿ ನಾರಾಯಣ ದೇಗುಲದ ಮೇಲೆ ಉಗ್ರರು ದಾಳಿಯಿಟ್ಟು, ಸುಮಾರು 50 ಜನರ ಹತ್ಯೆಗೈದಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಧಾರ್ಮಿಕ ಹಾಗೂ ಆಯಕಟ್ಟಿನ ಜಾಗೆಗಳಲ್ಲಿ ತೀವ್ರ ಪೊಲೀಸ್‌ ಪಹರೆ ನಿಯೋಜಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಲು ಜಿಲ್ಲಾ ಪೊಲೀಸ್‌ ಸೂಪರಿಂಟೆಂಡೆಂಟ್‌ಗಳು, ರೇಂಜ್‌ ಇನ್ಸ್‌ಪೆಕ್ಟರ್‌ ಜನರಲ್‌ ಆಫ್‌ ಪೊಲೀಸರು ಮತ್ತಿತರ ಪೊಲೀಸ್‌ ಅಧಿಕಾರಿಗಳಿಗೆ ಪೊಲೀಸ್‌ ಮಹಾ ನಿರ್ದೇಶಕ ವಿ.ವಿ.ಭಾಸ್ಕರ್‌ ಸೂಚಿಸಿದ್ದಾರೆ.

ಮಂಗಳವಾರ ಸಂಜೆ ಗುಜರಾತ್‌ನ ದೇಗುಲದ ಮೇಲೆ ಉಗ್ರರ ದಾಳಿಯ ಸುದ್ದಿ ಹೊರಬೀಳುತ್ತಿದ್ದಂತೆ, ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಉನ್ನತ ಪೊಲೀಸ್‌ ಅಧಿಕಾರಿಗಳ ಜೊತೆ ಚರ್ಚಿಸಿ, ಕಟ್ಟೆಚ್ಚರ ವಹಿಸುವಂತೆ ಸಲಹೆಯಿತ್ತರು. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮಹಾಜನತೆಯಲ್ಲಿ ಗೃಹ ಸಚಿವರು ಮನವಿ ಮಾಡಿಕೊಂಡಿದ್ದಾರೆ.

(ಪಿಟಿಐ)

ವಾರ್ತಾ ಸಂಚಯ

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X