ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರದುರ್ಗದ ಜೆ.ಜಿ.ಹಳ್ಳಿ ಬಳಿ ಲಾರಿ- ಮಿನಿಬಸ್‌ ಡಿಕ್ಕಿ : 10 ಸಾವು

By Staff
|
Google Oneindia Kannada News

ಚಿತ್ರದುರ್ಗ : ಜೆ.ಜಿ.ಹಳ್ಳಿ ಹತ್ತಿರ ಬುಧವಾರ ಮುಂಜಾನೆ ಮಿನಿ ಬಸ್‌ ಮತ್ತು ಲಾರಿ ನಡುವಿನ ಮುಖಾಮುಖಿ ಡಿಕ್ಕಿಯಿಂದ ಮೂವರು ಮಹಿಳೆಯರೂ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳಾದ 26 ಜನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಿನಿಬಸ್‌ ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುತ್ತಿತ್ತು. ವಿರುದ್ಧ ದಿಕ್ಕಿನಲ್ಲಿ ಲಾರಿ ವೇಗವಾಗಿ ಬಂದಾಗ, ಚಾಲಕರ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಿಂದ ಐವರು ಸ್ಥಳದಲ್ಲೇ ಮೃತಪಟ್ಟರು. ಉಳಿದ ಐವರು ಆಸ್ಪತ್ರೆಯಲ್ಲಿ ಅಸುನೀಗಿದರು. ಪೊಲೀಸರು ಮೃತರ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X