ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆಯಲ್ಲಿ ನಿರ್ಮಾಣವಾಗಲಿವೆ 458 ಶಾಲಾ ಕೊಠಡಿಗಳು!

By Staff
|
Google Oneindia Kannada News

ದಾವಣಗೆರೆ : ದಾವಣಗೆರೆ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ 458 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಂ.ವಿರುಪಾಕ್ಷ ತಿಳಿಸಿದ್ದಾರೆ.

ಗೆದ್ದಲಗೆಟ್ಟಿ ಯಲ್ಲಿ ನಡೆದ ಸಮಾರಂಭದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಿ ಮಾತನಾಡುತ್ತಿದ್ದ ವಿರುಪಾಕ್ಷ , ಸಂಸದರ ನಿಧಿ ಹಾಗೂ ನಬಾರ್ಡ್‌ ನೆರವಿನಿಂದ ಶಾಲಾ ಕೊಠಡಿಗಳ ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಒಂದು ಕೋಣೆ, ಒಬ್ಬ ಶಿಕ್ಷಕ ಯೋಜನೆಯಡಿಯಲ್ಲಿ ಈ ಕೋಣೆಗಳನ್ನು ನಿರ್ಮಿಸಲಾಗುವುದು ಎಂದರು.

ತಾಲ್ಲುಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಸಿದ್ಧಲಿಂಗಪ್ಪ, ದಾವಣಗೆರೆ ಚೇತನ ವಿದ್ಯಾಸಂಸ್ಥೆಗಳ ಅಧ್ಯಕ್ಷ ಜಿ.ಟಿ.ತಿಪ್ಪಣ್ಣ , ಎಚ್‌.ನೀಲಪ್ಪ ಹಾಗೂ ಕಾಡಾದ ಮಾಜಿ ಅಧ್ಯಕ್ಷ ಜಿ.ಸಿದ್ಧಲಿಂಗಪ್ಪ ಕಾರ್ಯಕ್ರಮದಲ್ಲಿ ಹಾಜರಿದ್ದರು. ಕೆ.ಎನ್‌.ಓಂಕಾರಪ್ಪ ಅವರು ಉಚಿತ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X