• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನರಗುಂದದಲ್ಲಿ ರೈತರಿಗೆ ಮುಖಾಮುಖಿಯಾದ ಕೃಷ್ಣ

By Staff
|

ಗದಗ : ಮಲಪ್ರಭಾ ನದಿಯನ್ನು ಮಹದಾಯಿ ನದಿಯಾಂದಿಗೆ ಜೋಡಿಸುವ ಮಹತ್ವಾಕಾಂಕ್ಷೆ ಯೋಜನೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಸದ್ಯದಲ್ಲೇ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕೇಂದ್ರ ಸರ್ಕಾರ ಏರ್ಪಡಿಸುವ ಕುರಿತು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಆಶಾವಾದ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ನರಗುಂದದಲ್ಲಿ ಸೋಮವಾರ (ನ.18) ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಬೃಹತ್‌ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೃಷ್ಣ , ಈ ಪ್ರದೇಶದ ಜನತೆಗೆ ವರದಾನವಾಗುವ ಮಲಪ್ರಭಾ-ಮಹದಾಯಿ ಜೋಡಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಸರ್ಕಾರದ ಕೊರಳಿಗೆ ಮಾತ್ರ ಕಟ್ಟುವುದನ್ನು ಬಿಟ್ಟು , ಜನತೆ ಕೂಡ ಯೋಜನೆಗಳು ಜಾರಿಯಾಗುವಲ್ಲಿ ಸರ್ಕಾರದೊಂದಿಗೆ ಕೈಗೂಡಿಸಬೇಕೆಂದು ಕೃಷ್ಣ ಮನವಿ ಮಾಡಿದರು. ಗದಗದಲ್ಲಿ ಪ್ರಾರಂಭಗೊಂಡ ನಮ್ಮ ಹೊಲ-ನಮ್ಮ ರಸ್ತೆ ಯೋಜನೆಯಲ್ಲಿ ಪ್ರತಿಶತ 25 ರಷ್ಟು ಜನತೆಯ ಸಹಯೋಗವಿದ್ದಲ್ಲಿ ಸರ್ಕಾರದ ಕೆಲಸ ಸುಲಭವಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಜನತೆಯ ಜೀವನ ಮಟ್ಟ ಸುಧಾರಣೆಗೆ ಸರ್ಕಾರ 1100 ಕೋಟಿ ರುಪಾಯಿಗಳ ಜಲ ನಿರ್ಮಲ ಯೋಜನೆ ಹಮ್ಮಿಕೊಂಡಿದೆ. ಗ್ರಾಮೀಣರ ಎಲ್ಲ ಸಮಸ್ಯೆಗಳನ್ನು ನಾವು ಬಗೆಹರಿಸಿದ್ದೇವೆ ಎಂದು ನಾನು ಹೇಳುವುದಿಲ್ಲ . ಆದರೆ ಬಹುತೇಕ ನೀರಾವರಿ ಯೋಜನೆಗಳು ಪೂರ್ಣಗೊಂಡಿವೆ ಎಂದು ಸರ್ಕಾರದ ಸಾಧನೆಯನ್ನು ಕೃಷ್ಣ ಬಣ್ಣಿಸಿದರು.

(ಏಜೆನ್ಸೀಸ್‌)

ಮುಖಪುಟ / ಕಾವೇರಿ ಕನ್ನಡಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more