ಚಿತ್ರರ್ದುಗದಲ್ಲಿ ಲಾಮಾಗೆ ಬಸವಶ್ರೀ ಪ್ರಶಸ್ತಿ ಪ್ರದಾನ
ಚಿತ್ರದುರ್ಗ : ಟಿಬೆಟಿಯನ್ನರ ಧರ್ಮಗುರು ದಲಾಯಿ ಲಾಮಾ ಅವರಿಗೆ ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಗುರುವಾರ (ಡಿ.5) ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.
ಶಾಂತಿ ಹಾಗೂ ಟೆಬೆಟಿಯನ್ನರ ಹಕ್ಕುಗಳಿಗಾಗಿ ಲಾಮಾ ಅವರು ನಡೆಸಿರುವ ಹೋರಾಟವನ್ನು ಗುರುತಿಸಿ ಬಸವ ಶ್ರೀ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿತ್ತು. ಒಂದು ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸಮಾರಂಭದಲ್ಲಿ ಭಾಗವಹಿಸಿದ್ದರು.
ಪ್ರಶಸ್ತಿಯನ್ನು ಸ್ವೀಕರಿಸಿದ ಲಾಮಾ, ಪ್ರಾಮಾಣಿಕರಾಗಿರುವಂತೆ ಹಾಗೂ ಆಧ್ಯಾತ್ಮಿಕ ಸ್ಫೂರ್ತಿಯನ್ನು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಅನುಸರಿಸುವಂತೆ ರಾಜಕಾರಣಿಗಳಿಗೆ ಕರೆ ನೀಡಿದರು. ಅಹಿಂಸೆಯ ಅಗತ್ಯ ಹಾಗೂ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು.
ಪ್ರಶಸ್ತಿಯ ಮೊತ್ತವಾದ 1 ಲಕ್ಷ ರುಪಾಯಿಯನ್ನು ಬೃಹನ್ಮಠಕ್ಕೆ ಹಿಂತಿರುಗಿಸುವುದಾಗಿ ಹೇಳಿದ ಲಾಮಾ, ಆ ಹಣವನ್ನು ಗ್ರಾಮೀಣಾಭಿವೃದ್ಧಿಗಾಗಿ ಬಳಸುವಂತೆ ಸೂಚಿಸಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications