ಚಿತ್ರದುರ್ಗದಲ್ಲಿ ಸ್ವಾತಂತ್ರ್ಯಹೋರಾಟಗಾರರ ವೀರಸೌಧ
ಚಿತ್ರದುರ್ಗ : ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಕನಸು ವೀರ ಸೌಧ ಕಟ್ಟಡಕ್ಕೆ ಕೆಸರು ಕಲ್ಲು ಹಾಕುವ ಕಾರ್ಯಕ್ರಮ ಡಿಸೆಂಬರ್ 24ರಂದು ನಡೆಯಲಿದೆ ಎಂದು ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಡಿ. ಚಿದಾನಂದಪ್ಪ ತಿಳಿಸಿದ್ದಾರೆ.
ವೀರ ಸೌಧಕ್ಕಾಗಿ 53 ಲಕ್ಷ ಹಣ ಬಿಡುಗಡೆ ಮಾಡಲು ಸರಕಾರ ಒಪ್ಪಿಕೊಂಡಿದ್ದು , 20 ಲಕ್ಷರೂಪಾಯಿ ಹಣ ಈಗಾಗಲೇ ಬಿಡುಗಡೆಯಾಗಿದೆ. ಡಿಸೆಂಬರ್ 24ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್ ಅವರು ವೀರಸೌಧ ನಿರ್ಮಾಣಕ್ಕೆ ಕೆಸರು ಕಲ್ಲು ಹಾಕಲಿದ್ದಾರೆ. ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಶರಣ ಅವರು ಈ ಸಂದರ್ಭದಲ್ಲಿ ಆಶೀರ್ವಚನ ನೀಡುವರು ಎಂದು ಚಿದಾನಂದಪ್ಪ ಹೇಳಿದರು.
ವೀರ ಸೌಧದಲ್ಲಿ ಮಕ್ಕಳಿಗೆ ದೇಶಭಕ್ತಿಯ ಅರಿವು ಮೂಡಿಸಲು, ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಳಸಿಕೊಳ್ಳಬಹುದು. ವೀರ ಸೌಧ ಮಾತ್ರವಲ್ಲದೆ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಕನಸಿನಂತೆ ತುರುವನೂರಿನಲ್ಲಿ ಗಾಂಧಿ ಭವನ ಕಟ್ಟುವುದಕ್ಕೆ ಸರಕಾರ ಒಪ್ಪಿಕೊಂಡಿದೆ.
ಮೈಸೂರು ಪ್ರಾಂತ್ಯದಲ್ಲಿರುವ ಐದು ಜಿಲ್ಲೆಗಳ ಪೈಕಿ ಚಿತ್ರದುರ್ಗ ಜಿಲ್ಲೆಯಲ್ಲಿಯೇ ಹೆಚ್ಚು ಮಂದಿ ಭಾರತ ಬಿಟ್ಟು ತೊಲಗಿ ಹಾಗೂ ಉಪ್ಪಿನ ಸತ್ಯಾಗ್ರಹ ಚಳವಳಿಯಲ್ಲಿ ಭಾಗವಹಿಸಿದವರಿದ್ದಾರೆ. ಈ ಹಿನ್ನೆಲೆಯಲ್ಲಿ ವೀರ ಸೌಧದಲ್ಲಿ ಗಾಂಧೀಜಿ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಚಿದಾನಂದಪ್ಪ ವಿವರಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications