ನಾಗಪ್ಪ ಹತ್ಯೆಯ ನ್ಯಾಯಾಂಗ ತನಿಖೆಗೆ ಆದೇಶ

ಬೆಂಗಳೂರು :ನಾಗಪ್ಪ ಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಕರ್ನಾಟಕ ಸರ್ಕಾರ ಆದೇಶ ಕೊಟ್ಟಿದೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನಾಗಪ್ಪ ಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ವಾರ್ತಾ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ತನಿಖೆಗೆ ನಡೆಸಲು ಮುಖ್ಯ ಕಾರಣಗಳೇನು ಎಂಬುದನ್ನು ಸರ್ಕಾರ ಸದ್ಯದಲ್ಲೇ ಸಿದ್ಧಪಡಿಸಲಿದೆ. ತನಿಖೆಯ ನೇತೃತ್ವವನ್ನು ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಹಿಸಬೇಕೋ ಅಥವಾ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಹಿಸಬೇಕೋ ಎಂಬುದನ್ನು ಹೈಕೋರ್ಟ್‌ ತೀರ್ಮಾನಿಸಲಿದೆ. ಡಿಸೆಂಬರ್‌ 23ರಿಂದ ಪ್ರಾರಂಭವಾಗಲಿರುವ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲೂ ತನಿಖೆಯ ವಿಚಾರವನ್ನು ಚರ್ಚಿಸಲಾಗುವುದು ಎಂದು ಕಾಗೋಡು ತಿಳಿಸಿದರು.

ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂಬ ವಿರೋಧ ಪಕ್ಷಗಳ ಹಾಗೂ ನಾಗಪ್ಪ ಕುಟುಂಬದವರ ಆಗ್ರಹಕ್ಕೆ ಸರ್ಕಾರ ಮಣಿದಿಲ್ಲ. ನ್ಯಾಯಾಂಗ ತನಿಖೆಯ ತೀರ್ಮಾನ ಕೈಗೊಂಡಿದ್ದರೂ, ವಿಧಾನ ಮಂಡಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ನಾಗಪ್ಪ ಪ್ರಕರಣದ ಬಗ್ಗೆ ಚರ್ಚೆ ನಡೆಸಬಹುದು ಎಂದರು.

(ಪಿಟಿಐ)

ಮುಖಪುಟ / ವೀರಪ್ಪನ್‌ ಶಿಕಾರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+