ಖಾಕಿ ಪೇದೆಗಳ ಬಿಗಿ ಪಹರೆ ನಡುವೆ ದತ್ತ ಜಯಂತಿ
ಚಿಕ್ಕ ಮಗಳೂರು : ಬಾಬಾ ಬುಡನ್ಗಿರಿಯ ದತ್ತ ಪೀಠದಲ್ಲಿ ಮೂರು ದಿನಗಳ ಕಾಲ ನಡೆಯುವ ದತ್ತ ಜಯಂತಿ ಮಂಗಳವಾರ ತಣ್ಣಗೆ ಶುರುವಾಗಿದೆ.
ಗಣಪತಿ ಹೋಮದೊಂದಿಗೆ ಪ್ರಾರಂಭವಾದ ಆಚರಣೆ ಮೂರು ದಿನಗಳ ಕಾಲ ನಡೆಯಲಿದೆ. ಮೊದಲ ದಿನವೇ ಸಾವಿರಾರು ಭಕ್ತರ ದಂಡು ಉತ್ಸವ ನೋಡಲು ನೆರೆದಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಣ್ಣಿಡಲು 6 ಸಾವಿರ ಪೊಲೀಸರ ದೊಡ್ಡ ದಂಡು ಬಾಬಾ ಬುಡನ್ಗಿರಿಯಲ್ಲಿ ನೆರೆದಿದೆ.
ಬುಧವಾರ (ಡಿ.18) ಚಿಕ್ಕ ಮಗಳೂರು ಜಿಲ್ಲಾ ಕೇಂದ್ರದಿಂದ ಶೋಭಾ ಯಾತ್ರೆ ಪ್ರಾರಂಭವಾಗಲಿದ್ದು, ಡಿಸೆಂಬರ್ 19ರಂದು ಉತ್ಸವದಲ್ಲಿ ಪ್ರಮುಖ ಪೂಜೆ ನಡೆಯಲಿದೆ. ಖುದ್ದು ದತ್ತ ಭಕ್ತರೂ ಆಗಿರುವ ಎಡಿಜಿ ಸುಭಾಷ್ ಭರಣಿ, ಪಶ್ಚಿಮ ವಲಯದ ಐಜಿಪಿ ಧರ್ಮಪಾಲ ನೇಗಿ ಹಾಗೂ ಚಿಕ್ಕಮಗಳೂರು ಎಸ್ಪಿ ಸ್ಥಳದಲ್ಲಿ ನಿಂತು ಭದ್ರತೆಯ ಕಡೆ ನಿಗಾ ವಹಿಸಿದ್ದಾರೆ.
ಮಾಗಿಯ ಕೊರೆಯುವ ಚಳಿಗೆ ಉತ್ತರ ಕರ್ನಾಟಕದ ಪೊಲೀಸರು ನಡುಗುತ್ತಿದ್ದರು. ಪಾಪ, ಅವರಿಗೆ ಈವರೆಗೆ ಈ ಪಾಟಿ ಚಳಿಯ ಬಿಸಿ ತಟ್ಟೇ ಇರಲಿಲ್ಲವೇನೋ? !
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications