ಸರ್ಕಾರ ಇಳಿಸಲು ಬಿಜೆಪಿ ಬೆಂಗಳೂರು ಚಲೋ
ಬೆಂಗಳೂರು : ನಾಗಪ್ಪನವರ ಸುರಕ್ಷಿತ ಬಿಡುಗಡೆ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಸೋಲುಗಳನ್ನು ಬೀದಿಗೆ ತರಲು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ. ಇದಕ್ಕಾಗಿ ಡಿಸೆಂಬರ್ 26ನೇ ತಾರೀಕು ಬೃಹತ್ ಬೆಂಗಳೂರು ಚಲೋ ಆಯೋಜಿಸಲಾಗಿದೆ.
ಗುರುವಾರ ಸುದ್ದಿಗಾರರಿಗೆ ಯಡಿಯೂರಪ್ಪ ಈ ವಿಷಯ ತಿಳಿಸಿದರು. ಸಂಯುಕ್ತ ಜನತಾದಳದ ಮುಖಂಡ ಎಚ್.ನಾಗಪ್ಪನವರನ್ನು ವೀರಪ್ಪನ್ ಅಪಹರಿಸಿದಾಗ ಅವರನ್ನು ಸುರಕ್ಷಿತವಾಗಿ ಬಿಡಿಸಿ ತರಲಿಲ್ಲ. ಗುತ್ತಿಗೆದಾರರಿಗೆ ಕೊಡಬೇಕಾಗಿರುವ 1110 ಕೋಟಿ ರುಪಾಯಿಯಷ್ಟು ಬಿಲ್ಲುಗಳು ಹಾಗೇ ಇವೆ. ಅಭಿವೃದ್ಧಿ ಕಾರ್ಯಗಳಿಗಂತೂ ಅಧೋಗತಿ ಬಂದಿದೆ ಎಂದು ಯಡಿಯೂರಪ್ಪ ಆರೋಪಿಸಿದರು.
ಸಾರ್ವಜನಿಕ ಕಾಮಗಾರಿ ಇಲಾಖೆ (ಪಿಡಬ್ಲ್ಯುಡಿ) 360 ಕೋಟಿ ರು., ಸಣ್ಣ ನೀರಾವರಿ ಇಲಾಖೆ 200 ಕೋಟಿ ರು. ಹಾಗೂ ಮಧ್ಯಮ ಮತ್ತು ದೊಡ್ಡ ನೀರಾವರಿ ಇಲಾಖೆ 450 ಕೋಟಿ ರುಪಾಯಿ ಬಿಲ್ಲುಗಳನ್ನು ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿವೆ. ಇವೆಲ್ಲಾ ಸರ್ಕಾರದ ವೈಫಲ್ಯಗಳನ್ನು ಹಿಡಿದೆತ್ತಿ ತೋರಲು 1 ಲಕ್ಷ ಮಂದಿ ಡಿಸೆಂಬರ್ 26ರಂದು ಬೆಂಗಳೂರು ಚಲೋ ನಡೆಸಲಿದ್ದೇವೆ ಎಂದರು.
ಕೊಳ್ಳೇಗಾಲದ ಸಂಯುಕ್ತ ಜನತಾ ದಳ ನಾಯಕ ಪೊನ್ನಾಚಿ ಮಹದೇವ ಸ್ವಾಮಿ ಮತ್ತು ವೀರಪ್ಪನ್ ನಡುವೆ ಅದೇನು ಮಾತುಕತೆ, ಹುನ್ನಾರ ನಡೆದಿದೆ ಎಂಬುದನ್ನು ಸರ್ಕಾರ ಬಯಲು ಮಾಡಬೇಕೆಂದು ಯಡಿಯೂರಪ್ಪ ಒತ್ತಾಯಿಸಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications