Get Updates
Get notified of breaking news, exclusive insights, and must-see stories!

ದೇಶದ 33ನೇ ಮುಖ್ಯನ್ಯಾಯಮೂರ್ತಿಯಾಗಿ ಖಾರೆ

Visheshwar Nath Khareನವದೆಹಲಿ : ದೇಶದ 33ನೇ ಮುಖ್ಯ ನ್ಯಾಯಮೂರ್ತಿಯಾಗಿ ವಿಶ್ವೇಶ್ವರ್‌ನಾಥ್‌ ಖಾರೆ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ 42 ದಿನಗಳ ಕಾಲ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿದ್ದ ಜೆ. ಬಿ. ಪಟ್ನಾಯಿಕ್‌ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನವನ್ನು ವಿ. ಎನ್‌. ಖಾರೆ ತುಂಬಿದರು. ಗುರುವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಎ. ಪಿ. ಜೆ. ಅಬ್ದುಲ್‌ ಕಲಮ್‌ ಅವರು ಖಾರೆಯವರಿಗೆ ಪ್ರಮಾಣ ವಚನ ಬೋಧಿಸಿದರು. 2004 ನೇ ಇಸವಿಯ ಮೇ 2ರಂದು ವಿ. ಎನ್‌. ಖಾರೆ ನಿವೃತ್ತರಾಗಲಿದ್ದಾರೆ.

ನ್ಯಾಯಮೂರ್ತಿ ಖಾರೆಯವರು ಸಿವಿಲ್‌, ರಿಟ್‌ ಹಾಗೂ ರೆವೆನ್ಯೂ ವಿಷಯಗಳಲ್ಲಿ ವಿಶೇಷ ಪರಿಣತಿ ಹೊಂದಿದ್ದು, ಈ ಹಿಂದೆ ಅಲಹಾಬಾದ್‌ ಹೈಕೋರ್ಟ್‌ ಮತ್ತು ಕಲ್ಕತ್ತಾ ಹೈ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+