ಡಿ. 26ರಿಂದ ಬೀದರ್‌ನಲ್ಲಿ 5 ದಿನಗಳ ಧರ್ಮ ಸಮ್ಮೇಳನ

ಬೀದರ್‌ : ಡಿಸೆಂಬರ್‌ 26ರಿಂದ ಐದು ದಿನಗಳ ಕಾಲ ರಂಭಾಪುರಿ ಜಗದ್ಗುರುಗಳ ಶಿವಲಿಂಗ ಮಹಾಪೂಜೆ ಮತ್ತು ಜನಜಾಗೃತಿ ಧರ್ಮ ಸಮ್ಮೇಳನವನ್ನು ಇಲ್ಲಿನ ಸಿಂಧೋಲ್‌ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.

ಜಗದ್ಗುರು ಪಂಚಾಚಾರ್ಯ ಮಾನವ ಧರ್ಮ ಸಂಸ್ಥೆ ಆಯೋಜಿಸುತ್ತಿರುವ ಈ ಐದು ದಿನದ ಸಮ್ಮೇಳನ 27 ವರ್ಷಗಳ ನಂತರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಈ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲು ಉದ್ದೇಶಿಸಲಾಗಿದೆ. ಸಮ್ಮೇಳನಕ್ಕಾಗಿ ತಯಾರಿ ನಡೆಸುತ್ತಿರುವ ಮಾನವ ಧರ್ಮಸಂಸ್ಥೆಯ ಗೌರವಾಧ್ಯಕ್ಷ ರಾಜೇಶ್ವರ ಶಿವಾಚಾರ್ಯ, ಅಧ್ಯಕ್ಷ ಬಸವರಾಜ ಜಾಬ ಶೆಟ್ಟಿ ಹಾಗೂ ಉಪಾಧ್ಯಕ್ಷ ಚನ್ನಬಸಪ್ಪ ಹಾಲಹಳ್ಳಿ, ಕಾರ್ಯದರ್ಶಿ ರಾಜಶೇಖರ್‌ ಗೋರ್ಟಾ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯರ ಪೀಠಾರೋಹಣದ 11ನೇ ವರ್ಷ ಪೂರೈಸುತ್ತಿದ್ದು ಈ ಶುಭ ಸಂದರ್ಭವನ್ನು ಸಮ್ಮೇಳನದೊಂದಿಗೆ ಆಚರಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+